ಕಲಬುರಗಿ: ಜಿಲ್ಲೆಯಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗುವುದು ಎಂದು ಮೂಲ ವೃತ್ತಿಯಲ್ಲಿ ವೈದ್ಯರಾಗಿರುವ ಸಂಸದ ಡಾ.ಉಮೇಶ ಜಾಧವ್ ತಿಳಿಸಿದ್ದಾರೆ.
ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಕೋವಿಡ್-19 ಸುರಕ್ಷಾ ಚಕ್ರ ಸಹಾಯವಾಣಿಯ ಕೇಂದ್ರದ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗುತ್ತಿದ್ದು, ಶೀಘ್ರವೇ ಕಲ್ಬುರ್ಗಿಯಲ್ಲಿಯೂ ಪ್ಲಾಸ್ಮಾ ಚಿಕಿತ್ಸೆ ಆರಂಭಿಸುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್-19 ಸುರಕ್ಷಾ ಚಕ್ರ ಸಹಾಯವಾಣಿಯ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಸಹಾಯವಾಣಿ ಕೇಂದ್ರದ ಬಗ್ಗೆ ಪತ್ರಕರ್ತರು ಸೇರಿದಂತೆ ಎಲ್ಲರ ಸಲಹೆ ಪಡೆದು ಎಂಟು ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಸಹಾಯವಾಣಿ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು ಎಂದು ತಿಳಿಸಿದರು.