ETV Bharat / state

ಕಲಬುರಗಿ: ಪಿಎಂ ಮಿತ್ರ ಟೆಕ್ಸ್​ ಟೈಲ್​ ಪಾರ್ಕ್.. ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ - ETV Bharat Kannada News

ಕಲಬುರಗಿ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪಿಎಂ ಮಿತ್ರ ಟೆಕ್ಸ್​ಟೈಲ್ ಪಾರ್ಕ್​ಗೆ ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ
ಸಚಿವ ಶಿವಾನಂದ ಪಾಟೀಲ
author img

By

Published : Aug 20, 2023, 11:04 PM IST

ಕಲಬುರಗಿ: ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ್ ಬಳಿ ಕೇಂದ್ರ ಸರ್ಕಾರದ ಪಿಎಂ ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ ಜಮೀನನ್ನು ಜವಳಿ ಇಲಾಖೆಗೆ ಒಂದು ತಿಂಗಳೊಳಗೆ ಹಸ್ತಾಂತರಿಸಿ, ಆರ್.ಟಿ.ಸಿಯಲ್ಲಿ ಹೆಸರು ಸೇರಿಸಬೇಕೆಂದು ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟೆ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 10 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆ ಸಾಕಾರಕ್ಕೆ ಜಮೀನಿನ ಗಡಿ ರೇಖೆ ಗುರುತಿಸುವ ಕೆಲಸ ಬೇಗ ಮುಗಿಸಬೇಕಿದೆ. ಇದರ ಜೊತೆಗೆ ಫೆನ್ಸಿಂಗ್ ಅಥವಾ ತಡೆಗೋಡೆ ನಿರ್ಮಿಸುವ ಮೂಲಕ ಜಮೀನು ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಲಬುರಗಿ ಜಿಲ್ಲೆಯಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ ದರಕ್ಕೆ ಕಬ್ಬು ಪಡೆದು ಇನ್ನು ರೈತರಿಗೆ ಹಣ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ರೈತ ಸಂಘಟನೆಗಳು ತಮ್ಮ ಬಳಿ ದೂರು ನೀಡಿವೆ. ಕೂಡಲೆ ಇದನ್ನು ಪರಿಶೀಲಿಸಿ ರೈತರಿಗೆ ಬರಬೇಕಾದ ಬಾಕಿ ಹಣ ಕಾರ್ಖಾನೆಗಳಿಂದ ವಸೂಲಿ ಮಾಡಬೇಕು ಎಂದು ಡಿ.ಸಿ ಅವರಿಗೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ವರುಣ ಕೈಕೊಟ್ಟ ಕಾರಣ ಮತ್ತು ನೀರಿನ ಕೊರತೆಯಿಂದ ಪಕ್ವತೆ ಇಲ್ಲದೆ ಕಬ್ಬಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಆದರಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ನವೆಂಬರ್ 1ರ ನಂತರವೇ ಮಾಡಬೇಕು. ನುರಿಸುವ ಮುನ್ನ ಸಕ್ಕರೆ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಕಾರ್ಖಾನೆಗಳು ಇದನ್ನು ಉಲ್ಲಂಘಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ : ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಮಳೆ-ಬೆಳೆ, ಬಿತ್ತನೆ ಪ್ರಮಾಣ, ಜಲಾಶಯದಲ್ಲಿ ನೀರಿನ ಸಂಗ್ರಹಣೆ ಪ್ರಮಾಣ, ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಸಮರ್ಪಕ ಮಳೆಯಾಗದ ಕಾರಣ ಮುಂದಿನ ದಿನದಲ್ಲಿ ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ. ಕೂಡಲೆ ಮಹಾರಾಷ್ಟ್ರದ ರಾಜ್ಯದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ನೀರು ಬಿಡುಗಡೆಗೆ ಕ್ರಮ ವಹಿಸಬೇಕು ಎಂದರು.

ಡಿಸಿ ಬಿ ಫೌಜಿಯಾ ತರನ್ನುಮ್ ಮಾತನಾಡಿ, ಈಗಾಗಲೆ ನೆರೆ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದರು. ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕ ಟಿ. ಎಚ್.ಎಂ ಕುಮಾರ ಅವರು ಉದ್ದೇಶಿತ ಪಾರ್ಕ್ ಕುರಿತು ಯೋಜನೆ ನಕಾಶೆಯೊಂದಿಗೆ ಸಚಿವರಿಗೆ ವಿಸ್ತಾರವಾಗಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಎಂ. ಸತೀಶ್​ ಕುಮಾರ, ಡಿ.ಡಿ.ಎಲ್.ಆರ್ ಪ್ರವೀಣ, ತಹಶೀಲ್ದಾರ್​ ನಾಗಮ್ಮ ಕಟ್ಟಿಮನಿ ಸೇರಿದಂತೆ ಜವಳಿ ಇಲಾಖೆಯ ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: ಯತ್ನಾಳರಿಗೆ ಮಾತಾಡುವ ಚಪಲ: ಸಚಿವ ಶಿವಾನಂದ ಪಾಟೀಲ್​ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.