ETV Bharat / state

ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

author img

By

Published : Jan 19, 2023, 3:06 PM IST

Updated : Jan 20, 2023, 8:00 AM IST

ಕಲಬುರಗಿ ಜಿಲ್ಲೆಯ ಮಳಖೇಡ್‌ನಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಭಾಷಣ ಮಾಡಿದರು.

ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ
ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ
ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹೊಸ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಚಾಲನೆ ನೀಡಿದರು. ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ತಾಂಡಾ ನಿವಾಸಿಗಳು ಮತ್ತು ಅರ್ಹ ಫಲಾನುಭವಿಗಳಿಗೆ ಏಕಕಾಲಕ್ಕೆ 50 ಸಾವಿರ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಇದಾಗಿದೆ. ಸಾಂಕೇತಿಕವಾಗಿ ಹಕ್ಕು ಪತ್ರ ವಿತರಿಸಿದ ಬಳಿಕ ಪ್ರಧಾನಿ ಮೋದಿ ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಬಂಜಾರಾ ಸಮುದಾಯದ ಸಾಂಪ್ರದಾಯಿಕ ಶಾಲು ಹಾಕಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸನ್ಮಾನಿಸಿದರು. ಅಲ್ಲದೇ, ಬಂಜಾರಾ ಸಮುದಾಯ ಮಹಿಳೆ ಕಸುತಿ ಮಾಡುತ್ತಿರುವ ಪ್ರತಿಮೆಯ ಸ್ಮರಣಿಕೆ ಹಾಗೂ ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪದ ಸ್ಮರಣಿಕೆಯನ್ನು ಪ್ರಧಾನಿ ಮೋದಿ ಅವರಿಗೆ ಪ್ರದಾನ ಮಾಡಲಾಯಿತು. ನಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಚಾಲನೆ ನೀಡಿದರು. ಇದೇ ವೇಳೆ ನಗಾರಿ ಬಾಸಿರುವ ಮೂಲಕ ಮೋದಿ ಗಮನ ಸೆಳೆದರು.

ಲಂಬಾಣಿ ಭಾಷೆಯಲ್ಲಿಯೇ ತಮ್ಮ ಭಾಷಣ ಪ್ರಾರಂಭಿಸಿದ ನರೇಂದ್ರ ಮೋದಿಯವರ ಮಾತಿಗೆ ಲಂಬಾಣಿ ಸಮುದಾಯ ಚಪ್ಪಾಳೆ ತಟ್ಟಿ ಸಂಭ್ರಮಿಸಿದಲ್ಲದೆ ಮೋದಿ ಮೋದಿ ಎಂದು ಘೋಷಣೆ ಕೂಗಿತು. ಪ್ರಧಾನಿ ಬಳಿಕ ಕನ್ನಡದಲ್ಲಿ ಮಾತನಾಡುತ್ತಿದ್ದಂತೆ ಜನರ ಚಪ್ಪಾಳೆ, ಹರ್ಷೋದ್ಘಾರ ಮುಗಿಲು ಮುಟ್ಟಿತು. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಸುದೀರ್ಘವಾಗಿ ಆಡಳಿತ ನಡೆಸಿದವರು ದಲಿತರು, ಆದಿವಾಸಿಗಳು ಮತ್ತು ವಂಚಿತರ ಏಳ್ಗೆ ಬಗ್ಗೆ ಗಮನ ಹರಿಸಲಿಲ್ಲ. ಸಮಾಜದ ವಂಚಿತ ವರ್ಗಗಳ ಹೆಸರಲ್ಲಿ ಕೇವಲ ಘೋಷವಾಕ್ಯಗಳ ಮೂಲಕ ಅವರ ಮತಗಳನ್ನು ಮಾತ್ರ ಪಡೆದರು. ಆದರೆ, ಈ ಸಮಾಜದ ಜನರ ಅಭಿವೃದ್ಧಿಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನಗಾರಿ ಬಾರಿಸಿ ಹಕ್ಕುಪತ್ರ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ: ವಿಡಿಯೋ

ತಳ ಸಮುದಾಯಗಳ ಅಭಿವೃದ್ಧಿಗೆ ಕ್ರಮ: ಆದರೆ, ನಾವು ವಂಚಿತ ವರ್ಗಗಳ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಮೊದಲ ಬಾರಿಗೆ ದಲಿತರು, ವಂಚಿತರಿಗೆ ಸರಿಯಾದ ಅವಕಾಶ, ಗೌರವ ಸಿಗುತ್ತಿದೆ. ಶೌಚಾಲಯ, ವಿದ್ಯುತ್​ ಜೊತೆಗೆ ಮೂಲಸೌಕರ್ಯಗಳನ್ನು ವೇಗವಾಗಿ ಒದಗಿಸಲಾಗುತ್ತಿದೆ. ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ತರಲಾಗಿದೆ. ಶೋಷಿತ ವರ್ಗಗಳ ಜನತೆ ತಮ್ಮ ಹಕ್ಕುಗಳನ್ನು ಅವರು ಪಡೆಯುತ್ತಿದ್ದಾರೆ ಪ್ರಧಾನಿ ಮೋದಿ ತಿಳಿಸಿದರು.

ರಾಷ್ಟ್ರದ ಪ್ರಗತಿಗೆ ಬಂಜಾರ ಹಾಗೂ ಅಲೆಮಾರಿ ಸಮುದಾಯ ಬಹುದೊಡ್ಡ ಕಾಣಿಕೆಯನ್ನು ನೀಡುತ್ತಾ ಬಂದಿದೆ. ಬಸವಾದಿ ಶರಣರು ಅನುಭವ ಮಂಟಪ ಮೂಲಕ ಬಹು ಹಿಂದೆಯೇ ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮಾದರಿಯನ್ನು ಜಗತ್ತಿಗೆ ಪರಿಚಯಿಸಿದ್ದರು. ಇದೇ ಸಿದ್ಧಾಂತದೊಂದಿಗೆ ನಾವು ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ತತ್ವವನ್ನು ಅನುಸರಿಸುತ್ತಿದ್ದೇವೆ. ಬಂಜಾರ ಸಮುದಾಯ ಬಹಳಷ್ಟು ವರ್ಷ ಖಾಯಂ ನೆಲೆ, ಸೂರು ಇಲ್ಲದೆ ಸಂಕಷ್ಟವನ್ನು ಎದುರಿಸಿದೆ, ತಮ್ಮ ಹಕ್ಕಿಗಾಗಿ ಬಹು ದೀರ್ಘಕಾಲ ಹೋರಾಡಿದೆ. ಈಗ ಅವರು ಕೂಡ ಗೌರವ, ಅಭಿಮಾನದಿಂದ ಬದುಕುವ ಕಾಲ ಬಂದಿದೆ. ಬರುವ ದಿನಗಳಲ್ಲಿ ಕಂದಾಯ ಗ್ರಾಮಗಳಾದ ಎಲ್ಲ ತಾಂಡಾ, ಹಾಡಿ, ಹಟ್ಟಿ ಮುಂತಾದ ಪ್ರದೇಶಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪಕ್ಕಾ ಮನೆಗಳನ್ನು ನಿರ್ಮಿಸಿ ಗುಡಿಸಲು ಮುಕ್ತ ಗ್ರಾಮಗಳನ್ನಾಗಿ ಮಾಡಲಾಗುವುದು, ಅಷ್ಟೇ ಅಲ್ಲದೆ, ಇಲ್ಲಿನ ಮನೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ, ನಲ್ಲಿ ನೀರು, ಅಡುಗೆ ಅನಿಲ ಸಂಪರ್ಕ ಒದಗಿಸಲಾಗುವುದು. ಸಮುದಾಯದ ಯುವ ಪ್ರತಿಭೆಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್, ಕೌಶಲ್ಯ ತರಬೇತಿ, ಉದ್ಯೋಗ ದೊರಕಿಸಲು ಶ್ರಮಿಸಲಾಗುವುದು. ಬಂಜಾರ ಸಮುದಾಯದವರು ಇನ್ನು ನಿಶ್ಚಿಂತೆಯಿಂದ ತಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ಕೋಟಿ ಕೋಟಿ ಜನ ಮುದ್ರಾ ಯೋಜನೆ ಲಾಭ ಪಡೆದಿದ್ದಾರೆ: ಕೋಟ್ಯಂತರ ಜನರು ಬ್ಯಾಂಕ್​​ ಬಾಗಿಲು ಸಹ ನೀಡಿರಲಿಲ್ಲ. ಮುದ್ರಾ ಯೋಜನೆಯಡಿ ಯಾವುದೇ ಭದ್ರತಾ ಇಲ್ಲದೇ ಎಸ್​ಸಿ, ಎಸ್​ಟಿ ಸಮುದಾಯವರಿಗೆ ಸಾಲದ ಸೌಲಭ್ಯ ಸಿಗುತ್ತಿದೆ. ಹಿಂದುಳಿದ ವರ್ಗಗಳಿಗೆ ನಮ್ಮ ಸರ್ಕಾರ ಸಂವಿಧಾನಾತ್ಮಕ ಮಾನ್ಯತೆ ಕೊಟ್ಟಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿದೆ. ಪ್ರತಿಯೊಂದು ಕಲ್ಯಾಣಕಾರಿ ಯೋಜನೆಯೊಂದಿಗೆ ಶೋಷಿತರು, ವಂಚಿತರನ್ನು ಜೋಡಿಸುವ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

ತಾಂಡಾಗಳಿಗೆ ಗ್ರಾಮಗಳ ಸ್ಥಾನಮಾನ ನೀಡಿ, ಎಲ್ಲ ಬಗೆಯ ಮೂಲಭೂತ ಸೌಕರ್ಯವನ್ನು ಕಲ್ಪಿಸಿ ತ್ವರಿತವಾಗಿ ಅಭಿವೃದ್ಧಿಪಡಿಸಲಾಗುವುದು. ಸ್ವಾಮಿತ್ವ ಯೋಜನೆ ಮೂಲಕ ಆಸ್ತಿ ದಾಖಲೆಗಳನ್ನು ನೀಡುತ್ತಿದ್ದೇವೆ. ನಮ್ಮ ಡಬಲ್ ಇಂಜಿನ್ ಸರ್ಕಾರದ ಎಲ್ಲ ಯೋಜನೆಗಳ ನೇರ ಲಾಭವನ್ನು ಈ ಗ್ರಾಮಗಳು ಪಡೆಯಲಿವೆ. ಕೇಂದ್ರ ಸರ್ಕಾರ 90 ಕ್ಕೂ ಹೆಚ್ಚು ಬಗೆಯ ವನೋತ್ಪತ್ತಿಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡುತ್ತಿದ್ದು, ಗ್ರಾಮಗಳಾಗಿ ಪರಿವರ್ತನೆಗೊಂಡ ತಾಂಡಾ ನಿವಾಸಿಗಳಿಗೂ ಕೂಡ ಈ ಸವಲತ್ತು ಸಿಗಲಿದೆ. ಎಬಿಎಆರ್​​ಕೆ ಯೋಜನೆ ಮೂಲಕ ಬಡವರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡುತ್ತಿದ್ದು, ಪಡಿತರ ಸಾಮಗ್ರಿ ವಿತರಣೆಯಲ್ಲಿಯೂ ಹೆಚ್ಚು ಪಾರದರ್ಶಕತೆ ತರಲಾಗಿದೆ. ಬ್ಯಾಂಕ್‍ಗಳ ಬಾಗಿಲನ್ನೂ ನೋಡದ ಸ್ಥಿತಿ ಒಂದಿತ್ತು. ಆದರೆ ಈಗ ಜನಧನ್ ಯೋಜನೆ, ಮುದ್ರಾ ಯೋಜನೆಗಳ ಮೂಲಕ ದೇಶದ 20 ಕೋಟಿಗೂ ಹೆಚ್ಚು ಜನರು ಯಾವುದೇ ಭದ್ರತೆ ಇಲ್ಲದೆ ಸಾಲ ಪಡೆದು, ಹೊಸ ಹೊಸ ಉದ್ಯಮಿಗಳ ಉಗಮವಾಗಿದೆ. ಮೆಡಿಕಲ್, ಇಂಜಿನಿಯರಿಂಗ್, ತಾಂತ್ರಿಕ ಸೇರಿದಂತೆ ಹಲವು ಉನ್ನತ ಶಿಕ್ಷಣವನ್ನು ಸ್ಥಳೀಯ ಭಾಷೆಯಲ್ಲಿಯೇ ವ್ಯಾಸಂಗ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಕರ್ನಾಟಕ ಇತಿಹಾಸದಲ್ಲಿ ಸಾಮಾಜಿಕ ಪರಿವರ್ತನೆಯ ಅತಿದೊಡ್ಡ ಕಾರ್ಯಕ್ರಮ ಇದಾಗಿದೆ. ತಾಂಡಾ, ಹಾಡಿ, ಹಟ್ಟಿ ಮುಂತಾದ ಜನವಸತಿ ಪ್ರದೇಶಗಳ ಜನರ ಜಾಗ ನಿಮ್ಮದಾಗಿರಲಿಲ್ಲ. 50 ವರ್ಷಗಳ ಬೇಡಿಕೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರೇರಣೆಯಿಂದಾಗಿ ನಾವು ಈಡೇರಿಸಿದ್ದೇವೆ. ಹೀಗಾಗಿ ನರೇಂದ್ರ ಮೋದಿ ಅವರನ್ನು “ಸಾಮಾಜಿಕ ಪರಿವರ್ತಕ” ಎಂದು ಬಣ್ಣಿಸಿದರು. ನಮ್ಮ ಡಬಲ್ ಇಂಜಿನ್ ಸರ್ಕಾರ ಸಾಮಾಜಿಕ ಭದ್ರತೆ ಕೊಡುವ ಮೂಲಕ ಇಂತಹ ಶೋಷಿತ ಸಮುದಾಯಕ್ಕೆ ಸಾಮಾಜಿಕ ಪರಿವರ್ತನೆ ಮಾಡುತ್ತಿದ್ದೇವೆ. ಪ್ರಧಾನಮಂತ್ರಿಗಳಿಂದ ಇಂದು ಹಕ್ಕುಪತ್ರ ನೀಡಿದ್ದು, ಈ ಸಮಾಜಕ್ಕೆ ದೊಡ್ಡ ಗೌರವ ಕೊಟ್ಟಂತೆ ಆಗಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಸಾಮಾಜಿಕ ಭದ್ರತೆ ಮತ್ತು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದೆ ಎಂದರು.

ಹಕ್ಕು ಪತ್ರ ವಿತರಣೆ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ ಜಿಲ್ಲೆಗಳ 342 ತಾಂಡಾ, ಹಟ್ಟಿ, ಹಾಡಿ, ಗೊಲ್ಲರಹಟ್ಟಿ ಗ್ರಾಮಗಳ 52,072 ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ನಿಟ್ಟಿನಲ್ಲಿ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಇದಾಗಿತ್ತು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಆರ್​.ಅಶೋಕ್, ಪ್ರಭು ಚವ್ಹಾಣ್, ಮುರುಗೇಶ್ ನಿರಾಣಿ, ಸಂಸದ ಉಮೇಶ್​ ಜಾಧವ್​, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್​ ಸೇರಿದಂತೆ ಅವರು ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಯಾದಗಿರಿ ಐತಿಹಾಸಿಕ, ಪಾರಂಪರಿಕ ಭೂಮಿ, ನಿಮ್ಮ ಆಶೀರ್ವಾದವೇ ನಮ್ಮ ಶಕ್ತಿ: ಕನ್ನಡದಲ್ಲಿ ಶುಭಕೋರಿದ ಮೋದಿ

Last Updated : Jan 20, 2023, 8:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.