ETV Bharat / state

ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ

ವಿಧಾನಸಭೆ ಚುನಾವಣೆಗೆ ಮತಬೇಟೆಗಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ಮಂಗಳವಾರ ಸಂಜೆ ಭರ್ಜರಿ ರೋಡ್​ ಶೋ ನಡೆಸಿದರು.

ಪ್ರಧಾನಿ ಮೋದಿ ರೋಡ್​ ಶೋ
ಪ್ರಧಾನಿ ಮೋದಿ ರೋಡ್​ ಶೋ
author img

By

Published : May 3, 2023, 7:02 AM IST

ಕಲಬುರಗಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದೆ. ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣತೊಟ್ಟಿದೆ. ಪಕ್ಷದ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಮತ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಕಲ್ಯಾಣ ಕರ್ನಾಟಕದಲ್ಲಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ ಮತ ಯಾಚಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಮೋದಿ ರೋಡ್ ಶೋ ನಡೆಸಿದರು. ಕಲಬುರಗಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಅವರು ಮತ ಕೇಳಿದರು. ಇದಕ್ಕೂ ಮುನ್ನ ನಗರದ ಡಿಎಆರ್ ಹೆಲಿಪ್ಯಾಡ್‍ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ನೇರವಾಗಿ ನಗರದ ಹುಮನಾಬಾದ್ ರಿಂಗ್ ರಸ್ತೆ ಬಳಿ ಇರುವ ಕೆಎಂಎಫ್‌ಗೆ ತೆರಳಿದರು. ಅಲ್ಲಿ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಅಲ್ಲಿಂದ ತೆರೆದ ವಾಹನದ ಮೂಲಕ ರೋಡ್ ಶೋ ಪ್ರಾರಂಭಗೊಂಡು ಗಂಜ್ ಪ್ರದೇಶ, ಸೂಪರ್ ಮಾರ್ಕೆಟ್, ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್‌ನಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಸಾಗಿ ಮತಬೇಟೆ ನಡೆಸಿದರು. ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡ ಮೋದಿಗೆ ಮಾರ್ಗದುದ್ದಕ್ಕೂ ನೆರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೂಮಳೆಗೈದರು.

ಬಿಗಿ ಪೊಲೀಸ್ ಬಂದೋಬಸ್ತ್: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಹುಮನಾಬಾದ್ ರಿಂಗ್ ರಸ್ತೆ ಬಳಿ ಇರುವ ಕೆಎಂಎಫ್‌ನಿಂದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದವರೆಗೂ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಮಧ್ಯಾಹ್ನದಿಂದಲೇ ವಾಹನಗಳ ಸಂಚಾರವನ್ನೂ ನಿಷೇಧಿಸಲಾಗಿತ್ತು.

ಗಮನ ಸೆಳೆದ ಮಕ್ಕಳು: ಪ್ರಧಾನಿ ಮೋದಿಯನ್ನು ನೋಡಲು ಪೋಷಕರೊಂದಿಗೆ ಮಕ್ಕಳೂ ಸಹ ಆಗಮಿಸಿದ್ದರು. ರಾಮ, ಲಕ್ಷ್ಮಣ, ಸೀತೆ, ಒನಕೆ ಓಬವ್ವ, ವಿವೇಕಾನಂದರು ಸೇರಿದಂತೆ ಅನೇಕ ಮಹನೀಯರ ವೇಷಭೂಷಣಗಳನ್ನು ಧರಿಸಿ ಆಗಮಿಸಿ ಗಮನ ಸೆಳೆದರು.

ನಗರದಲ್ಲೇ ಮೋದಿ ವಾಸ್ತವ್ಯ: ಕಲಬುರಗಿ ನಗರದಲ್ಲಿ ರೋಡ್ ಶೋ ಮುಗಿಸಿದ ನಂತರ ಮೋದಿ ಐವಾನ್-ಇ ಶಾಹಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ಕರಾವಳಿ ಕಡೆಗೆ ಪ್ರಯಾಣ ಕೈಗೊಳ್ಳುವರು.

ಪ್ರಧಾನಿ ನರೇಂದ್ರ ಮೋದಿಯವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸರದಾರ ವಲ್ಲಭಭಾಯಿ ಪಟೇಲ್ ಸರ್ಕಲ್​ನಲ್ಲಿ ಸೇರಿದ್ದರು. ಈ ವೇಳೆ ಆಂಬ್ಯುಲೆನ್ಸ್ ಆಗಮಿಸಿತ್ತು. ಜನಸ್ತೋಮದ ಮಧ್ಯೆ ಸೈನಿಕರು, ಪೊಲೀಸ್ ಹಾಗೂ ಸಾರ್ವಜನಿಕರು ಬ್ಯಾರಿಕೇಡ್​ಗಳನ್ನು ತೆರವುಗೊಳಿಸಿ ಆಂಬ್ಯುಲೆನ್ಸ್​ಗೆ ದಾರಿಮಾಡಿಕೊಟ್ಟರು.

ಇದನ್ನೂ ಓದಿ: ಭ್ರಷ್ಟಾಚಾರದ ಹಣದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ: ರಾಹುಲ್​ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.