ಕಲಬುರಗಿ: ಪೊಲೀಸ್ ಕ್ವಾರ್ಟರ್ಸ್ನ ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲು ಬಿರಾದಾರ ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೆಬಲ್. ಇವರು ರೋಜಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಪತ್ನಿಯೂ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.