ETV Bharat / state

ಹಲ್ಲೆಗೆ ಯತ್ನ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ - ಕಲಬುರಗಿ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ನಡೆದಿದೆ.

kalburgi
ಪಿಎಸ್‌ಐ ವಾಹೀದ್ ಕೋತ್ವಾಲ್
author img

By

Published : Feb 22, 2021, 6:35 AM IST

Updated : Feb 22, 2021, 6:57 AM IST

ಕಲಬುರಗಿ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್‌ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ‌.

ಹಲ್ಲೆಗೆ ಯತ್ನ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ನಿವಾಸಿ ಭೀಮು, ಬಾಬು ಹಾಗೂ ಇಬ್ಬರು ಹೆಣ್ಣು ಮಕ್ಕಳು ಸೇರಿ ಒಟ್ಟು ನಾಲ್ಕು ಜನ ಎರಡು ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲು ಮುಂದಾದ ಪೋಲಿಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗೆ ಪಿಎಸ್ಐ ಕೊತ್ವಾಲ್ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆಂದು ತಿಳಿದು ಬಂದಿದೆ.

ಸದ್ಯ ಆರೋಪಿಯಿಂದ 300 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಓದಿ: ರಾಂಚಿ ಪೊಲೀಸರಿಗೆ ಶರಣಾದ ಮೋಸ್ಟ್​ ವಾಂಟೆಡ್​​​​ ನಕ್ಸಲ್​ ಲೀಡರ್​

Last Updated : Feb 22, 2021, 6:57 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.