ಕಲಬುರಗಿ : ಕಲಬುರಗಿಯ ಡಿಎಆರ್ ಮೈದಾನದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಚಪ್ಪ ತಾಳಿಕೋಟಿ ಚಾಲನೆ ನೀಡಿದರು.
ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ, ಜಿಲ್ಲಾಧಿಕಾರಿ ಬಿ.ಶರತ್, ಎಸ್ಪಿ ಯಡಾ ಮಾರ್ಟಿನ್, ಜಿಲ್ಲಾ ಪಂಚಾಯ್ತಿ ಸಿಇಒ ಪಿ.ರಾಜಾ, ಪಾಲಿಕೆ ಆಯುಕ್ತ ರಾಹುಲ್ ಪಾಂಡೆ ಮತ್ತು ಡಿಸಿಪಿ ಕಿಶೋರ್ ಬಾಬು ಪಾರಿವಾಳ ಹಾರಿಸುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಪೊಲೀಸರಿಗೆ ಕ್ರಿಕೆಟ್, ಓಟ, ರಿಲೇ, ಶಾಟ್ಪುಟ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಕಲಬುರಗಿ ನಗರ ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ಉತ್ಸಾಹದಿಂದ ಭಾಗಿಯಾಗಿದ್ದರು.