ಕಲಬುರಗಿ: ಕೊರೊನಾ ಹರಡುವ ಭೀತಿಯಿಂದ ಅನಾವಶ್ಯಕವಾಗಿ ರಸ್ತೆ ಮೇಲೆ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ಸೂಪರ್ ಮಾರ್ಕೆಟ್ ಚೌಕ್ ಪೊಲೀಸ್ ಠಾಣೆ ಬಳಿ ನಾಕಾಬಂದಿ ಮಾಡಿರುವ ಟ್ರಾಫಿಕ್ ಪೊಲೀಸರು ಪ್ರತಿಯೊಂದು ವಾಹನಗಳನ್ನು ತಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮ್ಮನೆ ರಸ್ತೆಗಿಳಿಯದಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಕೆಲಸವಿಲ್ಲದೇ ರಸ್ತೆಗಿಳಿದಿದ್ದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಕಲಬುರಗಿ ನಗರದಲ್ಲಿ ಇಲ್ಲಿಯವರೆಗೆ 120ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.