ಸೇಡಂ: ಪಟ್ಟಣದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಕೈಗೊಂಡಿರುವ 400 ಮನೆಗಳ ಕಾಮಗಾರಿ ಕಳಪೆ ಮಟ್ಟದ್ದಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಯ್ತು.
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು 400 ಮನೆಗಳು ಮಂಜೂರಾಗಿದ್ದವು. ಪ್ರತಿ ಮನೆಗೆ ಸರ್ಕಾರಿ 4,82,000 ರೂ.ಗಳನ್ನು ಖರ್ಚು ಮಾಡಲು ಮುಂದಾಗಿತ್ತು. ಆದರೆ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ಸಿಮೆಂಟ್, ಕಬ್ಬಿಣ, ಕಿಟಕಿ, ಬಾಗಿಲು ಎಲ್ಲವೂ ಕಳಪೆ ಗುಣಮಟ್ಟದ್ದಾಗಿದೆ ಎಂದು ಅಂಬೇಡ್ಕರ್ ಯುವಸೇನೆ ಆರೋಪಿಸಿದೆ.
ಈ ಕುರಿತು ಕೂಲಂಕಷ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಲೋಕಾಯುಕ್ತದ ಮೊರೆ ಹೋಗುವುದಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರು ಪ್ರತಿಯಲ್ಲಿ ಒತ್ತಾಯಿಸಲಾಗಿದೆ. ಈ ವೇಳೆ ತಾಲೂಕು ಅಧ್ಯಕ್ಷ ಸಿದ್ದು ಊಡಗಿ, ಉಪಾಧ್ಯಕ್ಷ ಲೋಕೇಶ ಹಂದರಕಿ ಹಾಜರಿದ್ದರು.