ETV Bharat / state

ಮಸೀದಿಗಳಲ್ಲಿನ ಮೈಕ್​ ತೆರವಿಗೆ ಪ್ರಮೋದ್ ಮುತಾಲಿಕ್ ಒತ್ತಾಯ - ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ ತೆರವುಗೊಳಿಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

Pramod Muthalik
ಪ್ರಮೋದ್ ಮುತಾಲಿಕ್
author img

By

Published : Nov 24, 2021, 6:13 PM IST

ಕಲಬುರಗಿ: ಮಸೀದಿಗಳಲ್ಲಿ ಅಳವಡಿಸಿರುವ ಮೈಕ್​​​ಗಳನ್ನು ತೆರವುಗೊಳಿಸುವಂತೆ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ ಈ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ದಿನದಲ್ಲಿ ಐದು ಬಾರಿ ಮಸೀದಿಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಆ ಶಬ್ದದಿಂದ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ‌. ನಮಗೆ ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ. ಆದರೆ ಶಬ್ದಕ್ಕೆ ತಕರಾರಿದೆ. ಅನೇಕ‌ ಮುಸ್ಲಿಂ ದೇಶಗಳಲ್ಲಿ ಮಸೀದಿಗಳಲ್ಲಿ ಮೈಕ್ ತೆಗೆಯಲಾಗಿದೆ. ಆದರೆ ಇಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಲಫಲ ಶ್ರೀಗಳ ವಿರುದ್ಧ ಕಿಡಿ:

ಸುಲಫಲ ಶ್ರೀಗಳ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಪ್ರಿಯಾಂಕ್ ಖರ್ಗೆಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಮಾತಾಡಿದ್ದಾರೆ. ಅದು ಅವರ ರಾಜಕೀಯ ವಿಚಾರ. ಪ್ರಿಯಾಂಕ್ ಖರ್ಗೆಯವರ ಏಜೆಂಟ್ ಆಗಿ ನಿವ್ಯಾಕೆ ಮಾತಾಡಿದ್ದೀರಿ?‌, ನೀವು ಧಾರ್ಮಿಕ ಮುಖಂಡರಾಗಿ ಧಾರ್ಮಿಕ ವಿಚಾರಗಳ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ರಾಜಕೀಯವಾಗಿ ಮಾತನಾಡುವುದು ಸರಿಯಲ್ಲ. ಮಠಾಧಿಪತಿಗಳು ಮಠ, ಧರ್ಮ, ದೇಶ ಉಳಿಸಲು ಕಾರ್ಯ ಮಾಡಬೇಕು ಎಂದರು.

'ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿ':

ರಾಜ್ಯದಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗಿದೆ ಎಂದು ದೂರಿರುವ ಅವರು, 50ಕ್ಕೂ ಅಧಿಕ ಮಠಾಧೀಶರ ನೇತೃತ್ವದಲ್ಲಿ ಸಿಎಂ ಭೇಟಿಯಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಆಗ್ರಹಿಸಿದ್ದೆವು. ಕಾನೂನು ಜಾರಿಗೆ ತರದಿದ್ದರೆ ಜನವರಿ ತಿಂಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ. ಎಲ್ಲಾ ಕಡೆ ಕ್ರಿಶ್ಚಿಯನ್ ಸಮುದಾಯದವರು ತಂತ್ರಗಳನ್ನು ಉಪಯೋಗಿಸಿ ಮತಾಂತರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ.. ಜೆಡಿಎಸ್ ಜತೆಗಿನ ಹೊಂದಾಣಿಕೆ ಬಗ್ಗೆ ನಿರ್ಧರಿಸುತ್ತೇವೆ.. ಬಿಎಸ್​ವೈ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.