ETV Bharat / state

ಮನವಿ ಸ್ವೀಕರಿಸದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕ - ಕಲಬುರಗಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕರಿಂದ ಪ್ರತಿಭಟನೆ

ಕಚೇರಿ ಮೆಟ್ಟಿಲು ಇಳಿದು ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಆದರೆ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದೆ ವಾಪಸ್ ಹೋಗಿದ್ದರು. ಇದರಿಂದ ಮನನೊಂದ ಶಿಕ್ಷಣ ಸಂಸ್ಥೆಯ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

private education institution owner attempted suicide in Kalburgi
ಆತ್ಮಹತ್ಯೆಗೆ ಯತ್ನಿಸಿದ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕ
author img

By

Published : Feb 26, 2021, 4:24 PM IST

Updated : Feb 26, 2021, 6:36 PM IST

ಕಲಬುರಗಿ: ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸದೆ ವಾಪಸ್ ಹೋಗಿದ್ದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಡಿಸಿ ಕಚೇರಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕ

ಜೇವರ್ಗಿಯ ಖಾಸಗಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರಕಾಶ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇತ್ತೀಚೆಗೆ ಸಾಲಗಾರರ ಕಿರುಳದಿಂದ ಬೇಸತ್ತು ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕ ಶಂಕರ್ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಹಾಗೂ ಶಿಕ್ಷಕರು, ಶಂಕರ್ ಬಿರಾದಾರ್​ ಸಾವಿಗೆ ನ್ಯಾಯ ಕೊಡಿಸುವಂತೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಡಿಸಿ ವಿ.ವಿ.ಜೋತ್ಸ್ನಾ, ಡಿಸಿ ಕಚೇರಿ ಮೆಟ್ಟಿಲು ಇಳಿದು ಕೆಳ ಬಂದು ಮನವಿ ಸ್ವಿಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಆದರೆ, ಜಿಲ್ಲಾಧಿಕಾರಿ ಮನವಿ ಸ್ವೀಕರಿಸದೆ ವಾಪಸ್ ಹೋಗಿದ್ದರು. ಇದರಿಂದ ಮನನೊಂದ ಶಿಕ್ಷಣ ಸಂಸ್ಥೆಯ ಮಾಲೀಕ ಪ್ರಕಾಶ್​ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು, ವಿಷದ ಬಾಟಲಿಯನ್ನು ಕಸಿದುಕೊಂಡು ಅಸ್ವಸ್ಥಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಕಲ್ಯಾಣ ಕರ್ನಾಟಕದ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕರು ಹಾಗೂ ಶಿಕ್ಷಕರು ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹದಿನೈದು ದಿನಗಳ ಹಿಂದೆ ಅಷ್ಟೇಳ ರಸ್ತೆ ಮೇಲೆ ಭಿಕ್ಷೆ ಬೇಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು.

Last Updated : Feb 26, 2021, 6:36 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.