ETV Bharat / state

ಕಲಬುರಗಿ: ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಪ್ರತಿಭಟನೆ

ವಿವಿಧ ಬೆಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ನೇತೃತ್ವದಲ್ಲಿ ತಟ್ಟೆ ಹಿಡಿದು ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

author img

By

Published : Feb 9, 2021, 7:09 PM IST

protest in kalburgi
ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ನೇತೃತ್ವದಲ್ಲಿ ತಟ್ಟೆ ಹಿಡಿದು ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ನಗರದ ಕನ್ನಡ ಭವನದಿಂದ ಕೆಕೆಆರ್​ಡಿಬಿ ಕಚೇರಿವರಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಮಂದಿ ಶಿಕ್ಷಕರು, ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ 1995ರಿಂದ 2015ರವರೆಗಿನ ಎಲ್ಲಾ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ 371ಜೆ ಅಡಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು, ಕೇಂದ್ರ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದಂತೆ 100 ಸೈನಿಕ ಶಾಲೆಗಳ ಪೈಕಿ ಒಂದು ಸೈನಿಕ ಶಾಲೆಯನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುವಂತೆ ಪ್ರತಿಭಟನಾನಿರತ ಶಿಕ್ಷಕರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರೂ ಭಾಗವಹಿಸಿದ್ದರು. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಕೆಕೆಆರ್​ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಸೂಕ್ತ ಕ್ರಮ ಕೈಗೊಡು ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಇಬ್ಬರು ಶಿಕ್ಷಕರು ಅಸ್ವಸ್ಥ:

ಅನುದಾನ ರಹಿತ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಓರ್ವ ಶಿಕ್ಷಕಿ ಹಾಗೂ ಓರ್ವ ಶಿಕ್ಷಕ ಅಸ್ವಸ್ಥಗೊಂಡರು. ತೀವ್ರ ಅಸ್ವಸ್ಥಗೊಂಡ ಶಿಕ್ಷಕ ಮಲ್ಲಿಕಾರ್ಜುನ ಎಂಬುವವರನ್ನು ಆಟೋದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.