ಕಲಬುರಗಿ : ಕಳೆದ ಹಲವು ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಉದ್ದೇಶಪೂರ್ವಕವಾಗಿ ಶಾಸಕ ಅಜಯ್ಸಿಂಗ್ ಗೈರಾಗುತ್ತಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜೇವರ್ಗಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಕಳೆದ ಐದಾರು ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಾಲ್ಗೊಳ್ಳದೆ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ.
ನಿನ್ನೆ ಕ್ಷೇತ್ರದಲ್ಲಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಸಕರು ಇಂದು ಕನ್ನಡ ಸಂಭ್ರಮದಲ್ಲಿ ಪಾಲ್ಗೊಂಡಿಲ್ಲ ಎಂದು ಸಂಘಟನಾಕಾರರು ಕಿಡಿಕಾರಿದ್ದಾರೆ.
ಅಲ್ಲದೆ ರಸ್ತೆ ತಡೆ ನಡೆಸಿದ್ದರಿಂದಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗಾಗಿ, ಸಂಚಾರ ಮುಕ್ತಗೊಳಿಸಲು ಸ್ಥಳಕ್ಕಾಗಮಿಸಿದ ಪೊಲೀಸರ ನಡುವೆ ವಾಗ್ವಾದವೂ ಸಹ ನಡೆಯಿತು.
ಇದನ್ನೂ ಓದಿ: ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ