ಕಲಬುರಗಿ: ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ತೊನಸನಳ್ಳಿ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ದಲಿತ ಸಂಘರ್ಷ ಸಮಿತಿಯ ಮುಖಂಡ ಮರೆಪ್ಪ ಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ವರ್ಷಗಳಿಂದ ಗ್ರಾಮದ ಜನರಿಗೆ ಕೂಡಿಯುವ ನೀರು ಸಿಗುತ್ತಿಲ್ಲ. ನೀರಿನ ಸಮಸ್ಯೆ ತೆಲೆದೂರಿದ್ದು, ಗ್ರಾಮಸ್ಥರು ನೀರಿಗಾಗಿ ಪರಿತಪ್ಪಿಸುವಂತಾಗಿದೆ ಎಂದು ದೂರಿದರು. ಈ ಕೂಡಲೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿಕೊಡುವಂತೆ ಆಗ್ರಹಿಸಿದರು.
ಇನ್ನು ಗ್ರಾಮದ ಜನ ಮೂಲಭೂತ ಸೌಕರ್ಯದಿಂದ ವಂಚಿತರಾಗುತ್ತಿದ್ದಾರೆ. ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿದರು.