ಕಲಬುರಗಿ: ವಿದ್ಯುತ್ ಸುಧಾರಣಾ ಕಾಯ್ದೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಡ ಪಕ್ಷಗಳು ಮತ್ತು ರೈತ ಸಂಘಟನೆಗಳ ಮುಖಂಡರು ಜೆಸ್ಕಾಂ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮತ್ತು ಹೊರ ಗುತ್ತಿಗೆಗೆ ನೀಡಲು ಕೇಂದ್ರ ಯತ್ನಿಸುತ್ತಿದೆ. ಅದಕ್ಕಾಗಿಯೇ ಕಾಯ್ದೆಯನ್ನು ತಿದ್ದುಪಡಿ ತರಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಕ್ಷೇತ್ರವನ್ನು ಹೊರಗುತ್ತಿಗೆ ಹಾಗೂ ಖಾಸಗೀಕರಣಕ್ಕೆ ಒಪ್ಪಿಸಿದರೆ ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಕೂಡಲೇ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು. ಕೇಂದ್ರದ ಒತ್ತಡ ತಂತ್ರಕ್ಕೆ ರಾಜ್ಯ ಸರ್ಕಾರ ಮಣಿಯಬಾರದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಸೂದೆ ಜಾರಿಗೆ ತರಬಾರದು ಎಂದು ಆಗ್ರಹಿಸಿದರು.