ಕಲಬುರಗಿ: ಎನ್ಆರ್ಸಿ, ಸಿಎಎ ವಿರೋಧಿಸಿ ಕಲಬುರಗಿ ಜಿಲ್ಲೆ ಅಫಜಲಪುರ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಇಲ್ಲಿನ ಶರಣ ಸಾಹಿತ್ಯ ಪರಿಷತ್, ಲಿಂಗಾಯತ ಮಹಾಸಭಾ, ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಮುಸ್ಲಿಂ ಸಂಘಟನೆಗಳು ಜಂಟಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ಪುತ್ಥಳಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಮೆರವಣಿಗೆ ಉದ್ದಕ್ಕೂ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೌರತ್ವ (ತಿದ್ದುಪಡಿ) ಮಸೂದೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಜನವಾದಿ ಮಹಿಳಾ ಸಂಘಟನೆ ಕೆ.ನೀಲಾ, ಅಹಿಂದ ನಾಯಕ ಜೆ.ಎಂ.ಕೊರಬು, ಮಕ್ಸೋದ್ ಜಾಗೀರದಾರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.