ETV Bharat / state

ಕಲಬುರಗಿಯಲ್ಲಿ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ - ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಹೇಳಿಕೆ

'ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕಲಬುರಗಿಯ ಬಿಜೆಪಿ ಎಸ್​ಸಿ ಮೋರ್ಚಾದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

protest against siddaramaiah statement on dalits
ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ
author img

By

Published : Nov 3, 2021, 5:45 PM IST

ಕಲಬುರಗಿ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಭಾಷಣದ ವೇಳೆ 'ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ' ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸಿದ್ದರಾಮಯ್ಯನವರ ಅಣಕು ಶವಯಾತ್ರೆ ನಡೆಸಿ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ಬಿಜೆಪಿ ಎಸ್​ಸಿ ಮೋರ್ಚಾದ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ

ಇದನ್ನೂ ಓದಿ:ರಾಯಚೂರಿನಲ್ಲಿ ಪ್ರತಿಭಟನೆ ವೇಳೆ ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ

ಡಾ.ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಧಾರದ ಮೇಲೆ ಮುಖ್ಯಮಂತ್ರಿಯಾದವರು ಈ ರೀತಿ ಹೇಳಿಕೆ ನೀಡುವುದು ಸಮಂಜಸವಲ್ಲ. ರಾಜಕೀಯ ಒಂದು ಸಮಾಜಸೇವೆ ವಿನಹ ಇಲ್ಲಿ ಯಾರೂ ಹೊಟ್ಟೆ ತುಂಬಿಸಿಕೊಳ್ಳಲು ಬಂದವರಲ್ಲ. ಸಿದ್ದರಾಮಯ್ಯನವರು ಸಹ ಜೆಡಿಎಸ್ ತೊರೆದು ಕಾಂಗ್ರೆಸ್​​ಗೆ ಬಂದರು. ಹಾಗಾದ್ರೆ ಅವರು ಸಹ ಹೊಟ್ಟೆ ತುಂಬಿಸಿಕೊಳ್ಳಲು ಕಾಂಗ್ರೆಸ್ ಸೇರ್ಪಡೆಯಾದರೇ? ಎಂದು ಪ್ರತಿಭಟನಾಕಾರರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಲಿತರ ಕುರಿತು ವಿವಾದಿತ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

ಕೂಡಲೇ ಸಿದ್ದರಾಮಯ್ಯನವರು ತಾವು ಹೇಳಿದ ಮಾತನ್ನು ಹಿಂಪಡೆದು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.