ಕಲಬುರಗಿ: ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ನಗರದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಗೆ ವಿರೋಧ ವ್ಯಕ್ತಪಡಿಸಲಾಯಿತು. ಕರ್ನಾಟಕ ಪೀಪಲ್ಸ್ ಫೋರಂ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿ ಎದುರು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.
ಪೌರತ್ವದ ಹೆಸರಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಸಿವಿಲ್ ವಾರ್ ಸೃಷ್ಟಿಸುವ ಮೂಲಕ ದೇಶ ಇಬ್ಭಾಗ ಮಾಡಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾಯ್ದೆಗಳ ಜಾರಿಗೆ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಿಪಿಐ, ಸಿಪಿಐಎಂ, ದಲಿತ ಮತ್ತು ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡು, ಸಿಎಎ ವಿರುದ್ದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.