ಕಲಬುರಗಿ: ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ವಿವಿಧ ಪ್ರಗತಿಪರ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.
ನಗರದ ಜಗತ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನನಾಕಾರರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಮಸೂದೆ ತಿದ್ದುಪಡಿ ಧರ್ಮಬಾಹಿರವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಪೌರತ್ವ ಮಸೂದೆ ತಿದ್ದುಪಡಿ ವಿಚಾರವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.