ಕಲಬುರಗಿ: ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ಹಿಂದೂ ರಕ್ಷಕ ಶಿವಾಜಿ ಬ್ರಿಗೇಡ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವ್ಯವಸ್ಥಿತ ಪಿತೂರಿ ನಡೆಸಿ ಗಲಭೆ ಸೃಷ್ಟಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗಲಭೆಗೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಬೆಂಬಲವಿರುವ ಶಂಕೆ ಇದೆ. ಇವು ಸೇರಿದಂತೆ ಕೋಮು ದಳ್ಳುರಿ ಸೃಷ್ಟಿಸುತ್ತಿರುವ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.