ETV Bharat / state

ಅಂಗನವಾಡಿ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ - ಎಐಯುಟಿಯುಸಿ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರತಿ ತಿಂಗಳು ವೇತನ ದೊರೆಯುವಂತೆ ಮಾಡಬೇಕು. ಕೋವಿಡ್​ನಲ್ಲಿ ಕೆಲಸ ಮಾಡುತ್ತಿರುವವರಿಗೆ ಕಡ್ಡಾಯವಾಗಿ ಪಿಪಿಇ ಕಿಟ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು..

sedam
ಎಐಯುಟಿಯುಸಿ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Oct 3, 2020, 6:49 PM IST

ಸೇಡಂ : ಆಶಾ ಮತ್ತು ಅಂಗನವಾಡಿ ಸ್ಕೀಮ್ ನೌಕರರನ್ನು ಖಾಯಂ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸ್ಕೀಮ್ ವರ್ಕರ‍್ಸ್ ಫೆಡರೇಷನ್ ಆಫ್ ಇಂಡಿಯಾ ಮತ್ತು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಕುರಿತು ತಹಶೀಲ್ದಾರ್‌​​​ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ಧೋರಣೆ ಖಂಡಿಸಿ, ಮನವಿ ಪತ್ರ ಸಲ್ಲಿಸಿದರು. ಆಶಾ, ಅಂಗನವಾಡಿ, ಎಂಡಿಎಂ ಆರೋಗ್ಯ ಕಾರ್ಯಕರ್ತರು ಮತ್ತು ಎಲ್ಲ ಸ್ಕೀಮ್ ನೌಕರರನ್ನು ಖಾಯಂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು.

ಬೇಡಿಕೆ ಈಡೇರುವವರೆಗೆ ಕನಿಷ್ಟ 21 ಸಾವಿರ ವೇತನ ನೀಡಬೇಕು. ನಿವೃತ್ತ ನೌಕರರಿಗೆ ₹5 ಲಕ್ಷ ನಿವೃತ್ತಿ ಇಡಿಗಂಟು ನೀಡಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸ್ಕೀಮ್ ನೌಕರರನ್ನು ಖಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಕೆಲಸ ಮಾಡುವ ಸ್ಥಳದಲ್ಲಿ ವಿರಾಮ ಗೃಹ, ಶೌಚಾಲಯ, ಶುದ್ಧ ಕುಡಿವ ನೀರು, ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ತಿಂಗಳು ವೇತನ ದೊರೆಯುವಂತೆ ಮಾಡಬೇಕು. ಕೋವಿಡ್​ನಲ್ಲಿ ಕೆಲಸ ಮಾಡುತ್ತಿರುವವರಿಗೆ ಕಡ್ಡಾಯವಾಗಿ ಪಿಪಿಇ ಕಿಟ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಫೆಡರೇಷನ್ ಜಿಲ್ಲಾ ಸಮಿತಿಯ ವಿ ಜಿ ದೇಸಾಯಿ, ಲಕ್ಷ್ಮಿ ಮಳಖೇಡ, ಶಿವಲೀಲಾ ಕಾನಾಗಡ್ಡಾ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.