ಕಲಬುರಗಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ, ಮಾದಿಗ ದಂಡೋರಾ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.
ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ ಮತ್ತಿಮೂಡ, ಶಾಸಕಿ ಖನೀಸ್ ಫಾತಿಮಾ ನಿವಾಸಗಳ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸದಾಶಿವ ಆಯೋಗದ ಜಾರಿಗೆ ಕ್ರಮ ಕೈಗೊಳ್ತಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವಾದ್ರೂ ವರದಿ ಜಾರಿಗೆ ತರಬೇಕು. ವರದಿ ಜಾರಿಗೆ ತರುವಂತೆ ಮುಂಬರುವ ಅಧಿವೇಶನದಲ್ಲಿ ಆಗ್ರಹಿಸಬೇಕು. ಸದನದಲ್ಲಿ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಶಾಸಕರಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.