ಕಲಬುರಗಿ: ಜಿಲ್ಲೆಯಲ್ಲಿ ಚೀನಾ ವಿರುದ್ಧದ ಆಕ್ರೋಶ ಮುಂದುವರೆದಿದೆ. ಚೀನಾ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ಅಧ್ಯಕ್ಷನ ಭಾವಚಿತ್ರಕ್ಕೆ ಬೆಂಕಿ ಇಟ್ಟ ಕಾರ್ಯಕರ್ತರು, ಚೀನಾಗೆ ತಕ್ಕ ಉತ್ತರ ನೀಡುವಂತೆ ಆಗ್ರಹಿಸಿದರು.
ಗಡಿ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸಂಘರ್ಷದಲ್ಲಿ ಚೀನಾ ನಡೆಗೆ ಭಾರತೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಚೀನಾ ದೇಶದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ದೇಶದಲ್ಲಿರುವ ಚೀನಿಗಳನ್ನು ಮಟ್ಟ ಹಾಕುವಂತೆ ಆಕ್ರೋಶ ಹೊರಹಾಕಿದರು.