ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಅಹಿಂದ ಚಿಂತಕರ ವೇದಿಕೆ ಪ್ರತಿಭಟನೆ - Ahinda Thinkers Committee \

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಹಿಂದ ಚಿಂತಕರ ವೇದಿಕೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.

ಅಹಿಂದ ಚಿಂತಕರ ವೇದಿಕೆ ಪ್ರತಿಭಟನೆ
ಅಹಿಂದ ಚಿಂತಕರ ವೇದಿಕೆ ಪ್ರತಿಭಟನೆ
author img

By

Published : Aug 18, 2020, 6:14 PM IST

ಕಲಬುರಗಿ: 371(ಜೆ) ಮುಂಬಡ್ತಿ ಕಾಯ್ದೆ ತಿದ್ದುಪಡಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಹಿಂದ ಚಿಂತಕರ ವೇದಿಕೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.

ಕಲ್ಯಾಣ ಕರ್ನಾಟಕ ವಿಷಯದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕಲ್ಯಾಣ ಕರ್ನಾಟಕಕ್ಕೆ ಮುಂಬಡ್ತಿ ವಿಷಯದಲ್ಲಿ ಪದೇ ಪದೆ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

371 ಕಲಂನ ಮುಂಬಡ್ತಿ ನಿಯಮಗಳ ಕಾನೂನು ತಿದ್ದುಪಡಿ ಮಾಡಬೇಕು. ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಈ ಭಾಗದ ಅಭ್ಯರ್ಥಿಗಳಿಗೆ ಶೇ.8 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿದರು. ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.