ETV Bharat / state

ಜೆಎನ್​​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ಮೋದಿ, ಶಾ ಅಣುಕು ಶವ ಪ್ರದರ್ಶನ

ಜವಹರಲಾಲ್​ ನೆಹರು ವಿಶ್ವವಿದ್ಯಾಲಯದಲ್ಲಿನ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

Protest in Kalburgi
ಮೋದಿ, ಶಾ ಅಣುಕು ಶವ ಪ್ರದರ್ಶಿಸಿ ಪ್ರತಿಭಟನೆ
author img

By

Published : Jan 7, 2020, 9:34 AM IST

ಕಲಬುರಗಿ: ಜವಹರಲಾಲ್​ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ಸಿಪಿಐಎಂ, ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ‌ಪ್ರತಿಭಟನೆ ನಡೆಸಿದರು.

ನಗರದ ಜಗತ್ ವೃತ್ತದಲ್ಲಿ ರೈತ ಮುಖಂಡ ಮಾರುತಿ‌ ಮಾನ್ಪಡೆ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಶಾಸಕ ಸೋಮಶೇಖರ ರೆಡ್ಡಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಮಾಯಕ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಎಬಿವಿಪಿ ಮೂಲಕ ಗೂಂಡಾಗಿರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆ

ಶಾಸಕ‌ ಸೋಮಶೇಖರ ರೆಡ್ಡಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ನೀಡಿರುವುದು ಖಂಡನಾರ್ಹ. ಬಿಜೆಪಿ ದ್ವೇಷದ ರಾಜಕಾರಣ ಮಾಡುವುದನ್ನು ಕೈಬಿಡುಬೇಕು ಎಂದು ಒತ್ತಾಯಿಸಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾನೂನನ್ನು ಕೈಗೆತ್ತಿಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಮೋದಿ, ಶಾ ಅಣುಕು ಶವ ಪ್ರದರ್ಶನ:

ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಣಕು ಶವ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಕೋಮುವಾದಿ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದು, ವಿದ್ಯಾರ್ಥಿಗಳನ್ನು ಬಗ್ಗುಬಡಿಯಲು ಯತ್ನಿಸಿದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Intro:ಕಲಬುರಗಿ: ಜವಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಹಲ್ಲೆ ಪ್ರಕರಣ ಖಂಡಿಸಿ ಸಿಪಿಐಎಮ್, ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತ್ಯೇಕ ‌ಪ್ರತಿಭಟನೆ ನಡೆಸಿದರು.

Body:ನಗರದ ಜಗತ್ ವೃತ್ತದಲ್ಲಿ ರೈತ ಮುಖಂಡ ಮಾರುತಿ‌ ಮಾನ್ಪಡೆ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಶಾಸಕ ಸೋಮಶೇಖರ ರೆಡ್ಡಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಮಾಯಕ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಎಬಿವಿಪಿ ಮೂಲಕ ಗೂಂಡಾಗಿರಿ ನಡೆಸುತ್ತಿದೆ ಎಂದು ಆರೋಪಿಸಿದರು. ಶಾಸಕ‌ ಸೋಮಶೇಖರ ರೆಡ್ಡಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ನೀಡಿರುವುದು ಖಂಡನಾರ್ಹ, ಬಿಜೆಪಿ ದ್ವೇಷದ ರಾಜಕಾರಣ ಮಾಡುವದನ್ನು ಕೈಬಿಡುಬೇಕು ಎಂದು ಒತ್ತಾಯಿಸಿದರು. ಕೇಂದ್ರದ ಗೃಹ ಸಚಿವ ಅಮಿತ್ ಶಾ ಕಾನೂನನ್ನು ಕೈಗೆತ್ತಿಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಮೋದಿ, ಶಾ ಅಣುಕು ಶವ ಪ್ರದರ್ಶನ

ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಣಕು ಶವ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಕೋಮುವಾದಿ ಸಂಘಟನೆಗಳಿಗೆ ಕುಮ್ಮಕ್ಕು ನೀಡಿ, ವಿದ್ಯಾರ್ಥಿಗಳನ್ನು ಬಗ್ಗುಬಡಿಯಲು ಯತ್ನಿಸಿದರೆ ಸುಮ್ಮನೆ ಕೂಡೋದಿಲ್ಲ ಎಂದು ಎಚ್ಚರಿಕೆ ನೀಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.