ಕಲಬುರಗಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಅಂತಾ ಗಡಿ ವಿವಾದ ಸೃಷ್ಟಿಸಿರುವ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ದ ಕಲಬುರಗಿಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಎಸ್ವಿಪಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಉದ್ದವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಕಿಡಿಕಾರಿದ್ದಾರೆ. ಠಾಕ್ರೆ ಉದ್ದಟತನದ ಹೇಳಿಕೆ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.