ಕಲಬುರಗಿ: ಪೌರತ್ವ ಮಸೂದೆ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐ ಹಾಗೂ ಸಿಪಿಐಎಂ ನೇತೃತ್ವದಲ್ಲಿ ಕಲಬುರ್ಗಿಯ ಜಗತ್ ವೃತ್ತದಲ್ಲಿ ಅಹೋರಾತ್ರಿ ಧರಣಿ ಧರಣಿ ನಡೆಸಲಾಗುತ್ತಿದೆ.
ಇಂದಿನಿಂದ ಜನವರಿ 7 ರವರೆಗೂ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿರುವ ಮುಖಂಡರು, ಟೆಂಟ್ನಲ್ಲಿಯೇ ಊಟ ಮಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಆರ್ಥಿಕತೆ ಅಧೋಗತಿಗೆ ತಳ್ಳಲ್ಪಟ್ಟಿದೆ. ಅದನ್ನು ಮರೆಮಾಚಲು ಕೇಂದ್ರ ಇನ್ನಿಲ್ಲದ ಪ್ರಯತ್ನ ನಡೆಸಿದೆ.
ಎನ್.ಆರ್.ಸಿ., ಸಿಎಎ ಇತ್ಯಾದಿಗಳನ್ನು ತರುವ ಮೂಲಕ ಅಭದ್ರತೆಯ ವಾತಾವರಣ ನಿರ್ಮಿಸಲಾಗುತ್ತಿದೆ. ಕೂಡಲೇ ಪೌರತ್ವ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭನಾಕಾರರು ಎಚ್ಚರಿಸಿದ್ದಾರೆ.