ಕಲಬುರಗಿ : ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೂ ಕೂಡ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದವು.
ನಗರದಲ್ಲಿ ನಿಷೇಧಾಜ್ಞೆ ಹೊರಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಸಿಪಿಎಂ ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪೊಲೀಸ್ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ನಗರೇಶ್ವರ ಶಾಲೆಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡಿಲಾಗಿತ್ತು. ಆದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಯಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮುಖಂಡರು ಪ್ರತಿಭಟನೆ ಮುಂದುವರೆಸಿದರು.
ನಿಷೇಧಾಜ್ಞೆ ನಡುವೆಯೂ ನಗರದ ಮುಸ್ಲಿಂ ಚೌಕ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು . ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ಬಾಹಿರವಾಗಿದೆ. ಈ ಮೂಲಕ ಧರ್ಮ ಆಧಾರಿತ ವಿಭಜನೆ ಮಾಡುಲು ಹೊರಟಿರುವುದು ಖಂಡನಾರ್ಹ ಎಂದು ಆರೋಪಿಸಿ CAB ಬಿಲ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಶಾಸಕಿ ಖನಿಜ್ ಫಾತೀಮಾ, ಸಿಪಿಐಎಂ ಮುಖಂಡ ಮಾರುತಿ ಮಾನ್ಪಡೆ ಸೇರಿದಂತೆ ಮತ್ತಿತರ ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿದ್ದರು.