ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದೆ.
ನಗರದ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹತ್ತಾರು ಎತ್ತಿನಗಾಡಿ ಮೂಲಕ ಆಗಮಿಸಿದ ರೈತರು ಕಾಂಗ್ರೆಸ್ ಪ್ರತಿಭಟನೆಗೆ ಸಾಥ್ ನೀಡಿದರು. ರೈತ ವಿರೋಧಿ ಮೂರು ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು. ತೈಲ ಬೆಲೆ, ಅಡುಗೆ ಅನಿಲ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕಲಬುರಗಿ ನಗರದಲ್ಲಿಯೇ ಏಮ್ಸ್ ಸ್ಥಾಪಿಸಬೇಕು. ನೆನೆಗುದಿಗೆ ಬಿದ್ದಿರೋ ಕಲಬುರಗಿ ರೈಲ್ವೆ ವಲಯ ಕಚೇರಿ ಸ್ಥಾಪನೆ ಕಾರ್ಯ ಆರಂಭಿಸಬೇಕು ಎಂದು ಆಗ್ರಹಿಸಿದರು.
ಓದಿ: ಯಾವ ಸರ್ಕಾರವೂ ಬಡವನ ಮೇಲೆ ಬರೆ ಎಳೆಯಲ್ಲ.. ಕಡಿಮೆ ಇದ್ರೇ ಯಾರೂ ಮಾತಾಡಲ್ಲ.. ಸಚಿವ ಸುರೇಶ್‌ಕುಮಾರ್
ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಪ್ರತಿಕೃತಿ ದಹನಕ್ಕೆ ರೈತರು ಯತ್ನಿಸಿದಾಗ ಅದನ್ನು ಕಿತ್ತುಕೊಳ್ಳಲು ಪೊಲೀಸರು ಮುಂದಾದರು. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಕೆಲ ಸಮಯ ಘರ್ಷಣೆ ನಡೆಯಿತು.