ಕಲಬುರಗಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷರಿಗೆ ಆಹ್ವಾನ ನೀಡಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಬ್ರೆಜಿಲ್ ಅಧ್ಯಕ್ಷ ಮೆಸ್ಸಿಯಸ್ ಬ್ಲಾಸನಾರೋ ರೈತ ವಿರೋಧಿ. ಕಬ್ಬು ಬೆಳೆಗಾರರಿಗೆ ಅನ್ಯಾಯ ಎಸಗಿರುವ ಆತನಿಗೆ ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನ ನೀಡಿರೋದು ನಾಚಿಕೆಗೇಡಿನ ವಿಷಯ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಗೋ ಬ್ಯಾಕ್ ಬ್ಲಾಸೋನಾರೋ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರುವಂತೆ ಆಗ್ರಹಿಸಿದರು.