ಕಲಬುರಗಿ: ಪ್ರತಿ ಕ್ವಿಂಟಾಲ್ ತೊಗರಿಯನ್ನು 8,750 ರೂ.ಗೆ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಅನಿರ್ದಿಷ್ಟಾವದಿ ಧರಣಿ ಆರಂಭಿಸಲಾಗಿದೆ. ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ.
ಕಲಬುರಗಿ ಜಿಲ್ಲೆಯಲ್ಲಿ 13.50 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದೆ. ಅತಿವೃಷ್ಟಿ ಮತ್ತು ಕೊರೊನಾದಿಂದಾಗಿ ತೊಗರಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ಸ್ವಾಮಿನಾಥನ್ ವರದಿಯಂತೆ ಪ್ರತಿ ಕ್ವಿಂಟಾಲ್ ತೊಗರಿಗೆ 8,750 ರೂಪಾಯಿ ದರ ನಿಗದಿಗೊಳಿಸಬೇಕು.
ಓದಿ: ರಾತ್ರೋರಾತ್ರಿ ತೊಗರಿ ಬೆಳೆ ಕದ್ದೊಯ್ದ ಕಳ್ಳರು: ರೈತ ಕಂಗಾಲು
ರೈತರ ನೋಂದಣಿ ಪ್ರಕ್ರಿಯೆಯನ್ನು ಫೆ. 15 ರವರೆಗೂ ಮುಂದುವರೆಸಬೇಕು. ತೊಗರಿ ಖರೀದಿಯನ್ನು ಏಪ್ರಿಲ್ ಅಂತ್ಯದವರೆಗೂ ಮುಂದುವರೆಸಬೇಕು. ರೈತರು ಬೆಳೆದ ಎಲ್ಲಾ ತೊಗರಿಯನ್ನೂ ಖರೀದಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸೋ ಎಚ್ಚರಿಕೆ ನೀಡಿದ್ದಾರೆ.