ಕಲಬುರಗಿ: ಗ್ರಾಮ ಪಂಚಾಯಿತಿಯ ಸದಸ್ಯನ ಮೇಲೆ ವಿನಾಕಾರಣ ಪಿಎಸ್ಐ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಚಿತ್ತಾಪೂರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿರುವ ಘಟನೆ ಜರುಗಿತು.
ಚಿತ್ತಾಪುರ ತಾಲೂಕಿನ ಭೀಮನಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಅಯ್ಯಪ್ಪ ಎಂಬಾತ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಅಶ್ಲೀಲವಾಗಿ ಮಾತನಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆನಂದ ಕಲ್ಲಕ ಎಂಬುವವರು ದೂರು ನೀಡಿದ್ದಾರೆ. ಆದರೆ ಯಾವುದೇ ಪ್ರಕರಣ ದಾಖಲಿಸಿಕೊಳ್ಳದೇ ವಿನಾಕಾರಣ ಪಿಎಸ್ಐ ಎ. ಎಸ್ ಪಟೇಲ್ ಅವರು ಅಯ್ಯಪ್ಪ ಅವರನ್ನು ಸ್ಟೇಷನ್ಗೆ ಕರೆತಂದು ದೌರ್ಜನ್ಯ ಮಾಡಿದ್ದಾರೆ. ಅಲ್ಲದೇ ವಿಚಾರಣೆ ನೆಪದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಯಿಂದ ಕರೆತರುವಾಗ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಠಾಣೆಗೆ ಮುತ್ತಿಗೆ ಹಾಕಿದ್ದರು.
ಪಿಎಸ್ಐ ಎ. ಎಸ್ ಪಟೇಲ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರು ಪಿಎಸ್ಐ ಪಟೇಲ್ ಅವರ ಮೇಲೆ ಜಾತಿ ನಿಂದನೆ ಕೇಸು ದಾಖಲಿಸಿ ಸೇವೆಯಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದರು.
ಓದಿ: ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಜುಲೈ 10 ರಿಂದ ಪ್ರವೇಶ ಆರಂಭ: ಸಚಿವ ಅಶ್ವತ್ಥ ನಾರಾಯಣ