ETV Bharat / state

ಪಿಎಸ್ಐ ಪರೀಕ್ಷೆ ಅಕ್ರಮ: ಆರ್​ ಡಿ ಪಾಟೀಲ್ ಸಹಚರನ ಬಂಧನ - Arrested accused Ravutappa Valikar

ಪಿಎಸ್ಐ ಅಕ್ರಮ ಪ್ರಕರಣ ಹೊರಬೀಳುತ್ತಿದ್ದಂತೆ ನಾಪತ್ತೆಯಾಗಿದ್ದ ಈತನನ್ನು ಪತ್ತೆ ಮಾಡಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

Arrested accused Ravutappa Valikar
ಬಂಧಿತ ಆರೋಪಿ ರಾವುತಪ್ಪ ವಾಲಿಕಾರ್
author img

By

Published : Sep 29, 2022, 4:08 PM IST

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾವುತಪ್ಪ ವಾಲಿಕಾರ್ ಬಂಧಿತ ಆರೋಪಿ, ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್ ಡಿ ಪಾಟೀಲ್ ಸಹಚರನಾದ ಈತ ಹಲವು ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ರಾವುತಪ್ಪ, ಚಿತ್ತಾಪುರ ತಾಲೂಕಿನ ಗುಂಡಗುರ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದನು. ಪಿಎಸ್ಐ ಅಕ್ರಮ ಪ್ರಕರಣ ಹೊರಬೀಳುತ್ತಿದ್ದಂತೆ ನಾಪತ್ತೆಯಾಗಿದ್ದ ಈತನನ್ನು ಪತ್ತೆ ಮಾಡಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಆರ್.ಡಿ.ಪಾಟೀಲ್ ಹಾಗೂ ರಾವುತಪ್ಪ ಒಂದೇ ಊರಿನವರಾಗಿದ್ದು, ಪಾಟೀಲ್ ಜತೆ ಸೇರಿ ಅನೇಕ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಭ್ಯರ್ಥಿಗಳನ್ನು ಹುಡಿಕಿ‌ ತರೋದು, ಅಭ್ಯರ್ಥಿಗಳಿಗೆ ಬ್ಲೂಟೂತ್​ನಲ್ಲಿ ಉತ್ತರ ಹೇಳುವ ಟೀಂ ತಯಾರಿಸೋದು, ಕೆಲ ಸಂದರ್ಭದಲ್ಲಿ ತಾನೇ ಉತ್ತರ ಹೇಳುವ ಕೆಲಸ ಕೂಡಾ ಮಾಡುತ್ತಿದ್ದ ಎಂದು ಹೇಳಲಾಗಿದೆ.

ನಗರದ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಅಭ್ಯರ್ಥಿಗಳು ಪಾಸ್ ಆಗಲು ಸಹಕರಿಸಿದ್ದ, ಲೋಕೋಪಯೋಗಿ ಇಲಾಖೆಯ ಎ.ಇ, ಜೆ.ಇ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಅಭ್ಯರ್ಥಿಗಳಿಗೆ ಅಕ್ರಮವಾಗಿ ಉತ್ತರಗಳನ್ನು ಹೇಳಿಸಿದ್ದನಂತೆ, ಇದೀಗ ಸಿಐಡಿ ಅಧಿಕಾರಿಗಳು ರಾವುತಪ್ಪನನ್ನ ಬಂಧಿಸಿದ್ದು, ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಬಂಧಿತರ ಸಂಖ್ಯೆ 53 ಕ್ಕೆ ಏರಿಕೆ ಆದಂತಾಗಿದೆ.

ಇದನ್ನೂ ಓದಿ: ಪಿಎಸ್​ಐ ಹಗರಣ : ಅಮೃತ್ ಪಾಲ್ ಡಬಲ್‌ ಝೀರೋ ಕೋಡ್ ವರ್ಡ್​ ಭೇದಿಸಿದ ಸಿಐಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.