ಕಲಬುರಗಿ : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿದಂತೆ ಸಿಐಡಿ ಪೊಲೀಸರು ಮೂವರು ಮಹಿಳಾ ಮೇಲ್ವಿಚಾರಕಿಯರು ಸೇರಿ ಮತ್ತೆ ಆರು ಜನರನ್ನು ಬಂಧಿಸಿದ್ದಾರೆ.
ಕಲಬುರಗಿಯ ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಮಹಿಳಾ ಮೇಲ್ವಿಚಾರಕಿಯರಾದ ಸುಮಾ, ಸಿದ್ದಮ್ಮ, ಸಾವಿತ್ರಿ ಹಾಗೂ ಕಲಬುರಗಿ ತಾಲೂಕಿನ ಹಾಲ್ ಸುಲ್ತಾನ್‌ಪುರ ನಿವಾಸಿ ಅರುಣ್ ಪಾಟೀಲ್, ಆಳಂದ ತಾಲೂಕಿನ ಚೇತನ್ ನಂದಗಾಂವ್, ರಾಯಚೂರ ಮೂಲದ ಪ್ರವೀಣ್ ಕುಮಾರ್ ಕೆ ಎಂಬುವವರೇ ಬಂಧಿತ ಆರೋಪಿಗಳು. ಈಗಾಗಲೇ ಎಲ್ಲ ಆರೋಪಿಗಳನ್ನು ಪೊಲೀಸರು ಜೆಎಮ್ಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
545 ಪಿಎಸ್ಐ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆರದಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇ ಇತ್ತೀಚಿಗೆ ಬೆಂಗಳೂರಿನಿಂದ ಆಗಮಿಸಿದ್ದ ಸಿಐಡಿ ಪೊಲೀಸರು ಸೇಡಂ ಮೂಲದ ಎಎಸ್ಐ ಪುತ್ರ ವೀರೇಶ್ ಎಂಬ ಅಭ್ಯರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಈಗ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಆರೋಪ: ರ್‍ಯಾಂಕ್ ಪಡೆದಿದ್ದ ಕಲಬುರಗಿಯ ಅಭ್ಯರ್ಥಿ ಸಿಐಡಿ ವಶಕ್ಕೆ