ETV Bharat / state

ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದ ರಚನಾ ಸಿಐಡಿ ವಶಕ್ಕೆ - ಈಟಿವಿ ಭಾರತ ಕನ್ನಡ

ಶುಕ್ರವಾರ ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದ ತಂಡ ಆರೋಪಿ ರಚನಾರನ್ನು ವಶಕ್ಕೆ ಪಡೆದಿದ್ದಾರೆ.

psi-exam-scam-first-rank-candidate-rachana-arrested-by-cid
ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ರಚನಾ ಸಿಐಡಿ ವಶಕ್ಕೆ
author img

By

Published : Aug 27, 2022, 8:04 PM IST

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕಳೆದ ಮೂರು ತಿಂಗಳಿನಿಂದ ಸಿಐಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಪಿಎಸ್ಐ ಪರೀಕ್ಷೆ ಅಕ್ರಮದ ಮತ್ತೋರ್ವ ಮಹಿಳಾ ಆರೋಪಿ ಅಂದರ್ ಆಗಿದ್ದಾರೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ ಮುತ್ತಲಗೇರಿ ಕೊನೆಗೂ ಬಂಧನವಾಗಿದೆ.

ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದು ತಮ್ಮ ವಿರುದ್ಧ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂಬ ಸುಳಿವು ಸಿಗುತ್ತಿದ್ದಂತೆ ರಚನಾ ನಾಪತ್ತೆಯಾಗಿದ್ದರು. ಮೂರು ತಿಂಗಳಿಂದ ಸತತವಾಗಿ ಸ್ಥಳ ಬದಲಾವಣೆ ಮಾಡಿಕೊಂಡು ತಲೆಮರೆಸಿಕೊಂಡಿದ್ದ ರಚನಾಗಾಗಿ ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಶುಕ್ರವಾರ ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ನೇತೃತ್ವದ ತಂಡ ರಚನಾರನ್ನು ವಶಕ್ಕೆ ಪಡೆದಿದ್ದಾರೆ.

ಮೊದಲ ಪ್ರಯತ್ನದಲ್ಲೇ ರಾಜ್ಯಕ್ಕೆ ಪ್ರಥಮ ಸ್ಥಾ‌ನ: ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ, ಪೊಲೀಸ್ ಇಲಾಖೆ ನಡೆಸಿದ ಪ್ರೊಬೇಷನರಿ ಪೊಲೀಸ್ ಸಬ್​ ಇನ್ಸ್​ಪೆಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಆಯ್ಕೆಯಾಗಿದ್ದರು. ಇದೇ ಮೊದಲ ಬಾರಿ ಪೊಲೀಸ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದರು. ಮೊದಲ ಪ್ರಯತ್ನದಲ್ಲೇ ಪೇಪರ್ ಒಂದರಲ್ಲಿ 25 ಅಂಕ, ಪೇಪರ್ ಎರಡರಲ್ಲಿ 128.25 ಅಂಕ ಸೇರಿ ಒಟ್ಟು 153.25 ಅಂಕ ಗಳಿಸಿದ್ದರು.

ಹೋರಾಟದಲ್ಲೂ ಮುಂಚೂಣಿ ಸ್ಥಾನ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬರುತ್ತಿದ್ದಂತೆ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿತ್ತು. ಇದರಿಂದಾಗಿ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ನಷ್ಟವಾಗಲಿದೆ ಎಂದು ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯಲ್ಲೂ ರಚನಾ ಮುಂಚೂಣಿಯಲ್ಲಿದ್ದರು. ಆದರೆ, ಎಫ್‌ಐಆರ್ ದಾಖಲಾದ ಬಗ್ಗೆ ಸುಳಿವು ಸಿಗುತ್ತಿದ್ದಂತೆ ನಾಪತ್ತೆಯಾಗಿದ್ದರೆ. ಇಷ್ಟು ದಿನ ಮಹಾರಾಷ್ಟ್ರದ ಗಡಿಭಾಗದಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗ್ತಿದೆ.

ನ್ಯಾಯಾಲಯಕ್ಕೆ ಹಾಜರ್ - ಬೆಂಗಳೂರಿಗೆ ಶಿಫ್ಟ್​: ಶುಕ್ರವಾರ ವಶಕ್ಕೆ ಪಡೆದ ಸಿಐಡಿ ತಂಡ ವಿಚಾರಣೆ ನಡೆಸಿ ಇಂದು ಕಲಬುರಗಿ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಆರೋಪಿ ರಚನಾರನ್ನು ಸಿಐಡಿ ಅಧಿಕಾರಿಳು ಹಾಜರುಪಡಿಸಿದರು. ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದು ಅಧಿಕಾರಿಗಳು ಬೆಂಗಳೂರಿಗೆ ಆರೋಪಿಯನ್ನು ಕರೆದೊಯ್ದರು.

ಇದನ್ನೂ ಓದಿ: ಪಿಎಸ್ಐ ಹಗರಣದಲ್ಲಿ ಎಡಿಜಿಪಿ ಅಮೃತ್ ಪಾಲ್​​​ಗೆ ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.