ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಅಭ್ಯರ್ಥಿಯನ್ನು ಬಂಧಿಸಿದ್ದಾರೆ. ಎನ್.ವಿ.ಸುನೀಲ್ ಕುಮಾರ್ ಬಂಧಿತ. ಕಲಬುರಗಿ ಮೂಲದ ಈತ ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ಪರೀಕ್ಷೆ ಬರೆದಿದ್ದಾನೆ.
ಈತ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಕ್ಯಾಂಡಿಡೇಟ್ ಆಗಿದ್ದಾನೆ. ನಿನ್ನೆ ಓ.ಎಂ.ಆರ್ ಶೀಟ್ ಪರಿಶೀಲನೆಗೆ ಬೆಂಗಳೂರಿಗೆ ಸಿಐಡಿ ಕಚೇರಿಗೆ ಹೋದಾಗ ಎನ್.ವಿ.ಸುನೀಲ್ ಕುಮಾರ್ನನ್ನು ಬಂಧಿಸಲಾಗಿದೆ. ಸುನೀಲ್ನನ್ನು ಬೆಂಗಳೂರಿನಿಂದ ಕಲಬುರಗಿಗೆ ಕರೆತಂದಿರುವ ತನಿಖಾಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.
ಈತ ಸುಮಾರು 40 ಲಕ್ಷ ರೂ.ಗೂ ಹೆಚ್ಚು ಹಣ ಕೊಟ್ಟಿರುವ ಮಾಹಿತಿ ಲಭ್ಯವಾಗಿದೆ. ಮೂರು ದಿನಗಳ ಹಿಂದೆ ಆರ್.ಡಿ.ಪಾಟೀಲ್ ಹಾಗೂ ಸ್ನೇಹಿತ ಮಂಜುನಾಥ ಅಲಿಯಾಸ್ ಮಲ್ಲುಗೌಡನನ್ನು ಬಂಧಿಸಿರುವ ಸಿಐಡಿ, ಇಬ್ಬರನ್ನು 13 ದಿನ ಕಸ್ಟಡಿಗೆ ಪಡೆದಿದೆ. ಇಲ್ಲಿಗೆ ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಬಂಧಿತರ ಸಂಖ್ಯೆ 16ಕ್ಕೇರಿದೆ.
ಇದನ್ನೂ ಓದಿ: ಅಸ್ಟಿಸೆಂಟ್ ಪ್ರೊಫೆಸರ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಖಾಕಿ