ಕಲಬುರಗಿ : ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಆರ್ ಡಿ ಪಾಟೀಲನನ್ನು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಜೂನ್ 2 ರ ವರೆಗೆ ಆರ್ ಡಿ ಪಾಟೀಲನನ್ನು ಸಿಐಡಿ ಕಸ್ಟಡಿಗೆ ನೀಡಲಾಗಿದೆ. 7 ದಿನದ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಹೀಗಾಗಿ ಮೂರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಆರ್ ಡಿ ಪಾಟೀಲ್ ನನ್ನು ನಗರದ ಎಂ ಎಸ್ ಇರಾಣಿ ಕಾಲೇಜಿನಲ್ಲಿ ನಡೆದ ಪಿಎಸ್ಐ ಅಕ್ರಮ ಪ್ರಕರಣದ ಹಿನ್ನೆಲೆ ಎರಡನೇ ಬಾರಿ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದರು. ಇದೀಗ ಮೂರನೇ ಬಾರಿ ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಕಸ್ಟಡಿಗೆ ಪಡೆಯಲಾಗಿದೆ.
ಓದಿ : ಮೂರನೇ ಅಭ್ಯರ್ಥಿ ಗೆಲುವಿಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ : ಸಚಿವ ಆರ್.ಅಶೋಕ್