ETV Bharat / state

ಸಾರಿಗೆ ನೌಕರರ ಮುಷ್ಕರಕ್ಕೆ ಸಾರ್ವಜನಿಕರ ಪರದಾಟ : ಬೇಳೆ ಬೇಯಿಸಿಕೊಂಡ ಖಾಸಗಿ ವಾಹನಗಳು

author img

By

Published : Apr 7, 2021, 10:11 PM IST

ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಾರಿಗೆ ನೌಕರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾಸಕ, ಎನ್​ಈಕೆಎಸ್​ಆರ್​ಟಿಸಿ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೆಲ್ಕೂರ್, ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಹರಿಹಾಯ್ದರು..

strike
strike

ಕಲಬುರಗಿ : ಸಾರಿಗೆ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಇಂದು ಕಲಬುರಗಿ ಬಸ್ ನಿಲ್ದಾಣ ಅಕ್ಷರಶಃ ಸ್ತಬ್ಧವಾಗಿತ್ತು. ಬೆರಳೆಣಿಕೆಯಷ್ಟು ಪ್ರಯಾಣಿಕರು ಬಸ್​ಗಾಗಿ ಕಾದುಕುಳಿತ ದೃಶ್ಯ ಕಂಡು ಬಂದವು.

ಬಸ್ ನಿಲ್ದಾಣದಲ್ಲಿ ಬಸ್​ಗಳು ಇಲ್ಲದ ಕಾರಣ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋದರು. ಬೆಳಗ್ಗೆ ಬಸ್ ಕಡಿಮೆ ಇರುವ ಕಾರಣ ಪ್ರಯಾಣಿಕರು ಪರದಾಡುವಂತಾಯಿತು. ಕೆಲ ಸಮಯದ ನಂತರ ಬಂದ ಖಾಸಗಿ ಬಸ್​ಗಳನ್ನು ಕಂಡು ನಿಟ್ಟುಸಿರು ಬಿಟ್ಟರು.

ಸಾರಿಗೆ ನೌಕರರ ಮುಷ್ಕರಕ್ಕೆ ಸಾರ್ವಜನಿಕರ ಪರದಾಟ..

ಖಾಸಗಿ ದರ್ಬಾರ್ : ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಸರ್ಕಾರ ಖಾಸಗಿ ಬಸ್​ಗಳ ವ್ಯವಸ್ಥೆ ಮಾಡಿದೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸಗಿ ಬಸ್​ಗಳು ಹಾಗೂ ಆಟೋಗಳು ಸಾಲುಗಟ್ಟಿ ನಿಂತಿದ್ದವು. ಆದರೆ, ಸಾರಿಗೆ ಬಸ್ ದರಕ್ಕಿಂತ 20-50 ರೂ. ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದರು.

ಕೋಡಿಹಳ್ಳಿ ವಿರುದ್ಧ ಕಿಡಿ : ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಾರಿಗೆ ನೌಕರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಶಾಸಕ, ಎನ್​ಈಕೆಎಸ್​ಆರ್​ಟಿಸಿ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೆಲ್ಕೂರ್, ಪರೋಕ್ಷವಾಗಿ ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಹರಿಹಾಯ್ದರು.

144 ನಿಷೇಧಾಜ್ಞೆ : ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಜಿಲ್ಲೆಯಾದ್ಯಂತ ಬಸ್ ಡಿಪೋ ಹಾಗೂ ಬಸ್ ನಿಲ್ದಾಣಗಳ ಬಳಿ 144 ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿವಿ ಜೋತ್ಸ್ಯಾ ಆದೇಶ ಹೊರಡಿಸಿದ್ದರು.

ರಾತ್ರಿ 10ಗಂಟೆಯವರಗೆ ಸಿಆರ್​ಪಿಸಿ ಕಾಯ್ದೆ 1973ರ ಅನ್ವಯ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಕೇಂದ್ರ ಬಸ್ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಒದಗಿಸಲಾಗಿತ್ತು.

ಇದನ್ನೂ ಓದಿ.. ಡಿಸಿ ಕಚೇರಿ ಮುಂದೆ ಬಿದ್ದುಹೊರಳಾಡಿದ ಬಿಜೆಪಿ ಎಂಎಲ್​ಎ: ಕಾರಣ? VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.