ETV Bharat / state

ಭೀಕರ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು: ಆರ್. ಅಶೋಕ್​​​

ಕಲಬುರಗಿ ಜಿಲ್ಲೆಗೆ ಮಳೆಯಿಂದಾಗಿ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಜೊತೆಗೆ ಕೇಂದ್ರ ಸರ್ಕಾರದ ಪರಿಹಾರದ ಜೊತೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಆರ್​ ಅಶೋಕ್​ ಸಂತ್ರಸ್ತರಿಗೆ ಅಭಯ ನೀಡಿದರು.

R Ashok
ಆರ್ ಅಶೋಕ್​​​
author img

By

Published : Oct 16, 2020, 2:02 PM IST

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಈ ಭೀಕರ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡೋದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಜಿಲ್ಲೆಯ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಾರು 30 ವರ್ಷಗಳ ಬಳಿಕ ಈ ಭಾಗದಲ್ಲಿ ಭಾರಿ‌ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದ ಈ ಭಾಗದ ಜನತೆಗೆ ತೀವ್ರ ಸಂಕಷ್ಟ ಎದುರಾಗಿದೆ ಎಂದರು.

ಪ್ರವಾಹ ವೀಕ್ಷಣೆಗೆ ಆಗಮಿಸಿದ ಆರ್ ಅಶೋಕ್​

ಕಲಬುರಗಿಗೆ ಭಾರಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪರಿಹಾರದ ಜೊತೆ ರಾಜ್ಯ ಸರ್ಕಾರದಿಂದಲೂ ಹೆಚ್ಚುವರಿ ಪರಿಹಾರ ನೀಡುವುದಾಗಿ ತಿಳಿಸಿದರು.

ಕಲಬುರಗಿ ಸೇರಿ ಬೀದರ್, ರಾಯಚೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರವಾಹ ಆಗಿದೆ. ಈ ನಿಟ್ಟಿನಲ್ಲಿ 173 ತಾಲೂಕಗಳನ್ನು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಎಲ್ಲ 11 ತಾಲೂಕುಗಳು ಪ್ರವಾಹ ಪೀಡಿತ ಎಂದು ಘೋಷಿಸಿದ್ದೇವೆ ಎಂದು ಸಚಿವ ಆರ್​ ಅಶೋಕ್​ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.