ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಚಿಂಚೋಳಿ ತಾಲೂಕಿನ ಮುಲ್ಲಾಮಾರಿ ಜಲಾಶಯದ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ ಐದು ಗೇಟ್ಗಳ ಮೂಲಕ 5 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.
ಯಾವುದೇ ಮುನ್ಸೂಚನೆ ಇಲ್ಲದೆ ನೀರು ಬಿಟ್ಟ ಹಿನ್ನೆಲೆ ನದಿ ಪಾತ್ರದ ಹಳ್ಳಿಗಳಿಗೆ ನೀರು ನುಗ್ಗಿದೆ. ಚಿಂಚೋಳಿ ಪಟ್ಟಣದ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದ್ದು, ದೇವಸ್ಥಾನಗಳು ಜಲಾವೃತವಾಗಿವೆ.
ದೇವಸ್ಥಾನದಲ್ಲಿ ಸಿಲುಕಿದ್ದ ಐವರ ರಕ್ಷಣೆ:
ನೀರು ನುಗ್ಗಿದ ಹಿನ್ನೆಲೆ ಚಿಂಚೋಳಿಯ ಚಂದಾಪುರದ ಹನುಮಾನ ದೇವಸ್ಥಾದಲ್ಲಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಚಿಮ್ಮನಚೋಡ ಗ್ರಾಮದ ಸಂಗಮೇಶ್ವರ ದೇವಸ್ಥಾನ ಕೊಡ ಜಲಾವೃತವಾಗಿದ್ದು, ಈ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಗ್ರಾಮಸ್ಥರೇ ರಕ್ಷಣೆ ಮಾಡಿದ್ದಾರೆ.