ಯಾದಗಿರಿ: ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧ. ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಈ ಹಿನ್ನೆಲೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು. ಇನ್ನು ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಗೆ ಸಚಿವರು ನಿರಾಕರಿಸಿದರು.
ಮೃತ ತೈತನ ಮನೆಗೆ ಪ್ರಭು ಚವ್ಹಾಣ ಭೇಟಿ:
ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಸುರೇಶ್ ರಾಠೋಡ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ. ಧನಸಹಾಯ ಮಾಡಿದರು. ಸರ್ಕಾರದಿಂದ ಸಿಗಬೇಕಾದ ಪರಿಹಾರದ ಹಣ ಹಾಗೂ ಸೌಕರ್ಯ ಶೀಘ್ರವೇ ಕಲ್ಪಿಸುವುದಾಗಿ ಮೃತ ರೈತನ ಕುಟುಂಬಕ್ಕೆ ಭರವಸೆ ನೀಡಿದರು.