ಕಲಬುರಗಿ: ಜಿಲ್ಲೆಯಲ್ಲಿ ಶುಕ್ರವಾರ 62 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,348ಕ್ಕೆ ತಲುಪಿದೆ. ನಿನ್ನೆ ಸೋಂಕಿನಿಂದ 80 ಜನ ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ಇಲ್ಲಿಯವರೆಗೆ 305 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ ಕೇವಲ 679 ಸಕ್ರೀಯ ಪ್ರಕರಣಗಳಿದ್ದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.