ಕಲಬುರಗಿ: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಣೆಯಾದ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿ, ಬಗರ್ ಹುಕುಂ ಸಾಗುವಳಿದಾರರ ಭೂಮಿಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು, ಪ್ರವಾಹ ಪೀಡಿತರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಡಾ.ಸ್ವಾಮಿನಾಥನ್ ಆಯೋಗದ ವರದಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೆ ಉದ್ಯೋಗ ಖಾತ್ರಿ ಸಮರ್ಪಕ ಜಾರಿ ಸೇರಿದಂತೆ 21 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್ ಆಚರಿಸುವುದಾಗಿ ತಿಳಿಸಿದ್ದಾರೆ.