ಕಲಬುರಗಿ: ತೊಗರಿ ಬೆಳೆಗೆ ಪ್ರೋತ್ಸಾಹ ಧನ ನೀಡದ ಸರ್ಕಾರದ ವಿರುದ್ಧ ಪ್ರತಿಭಟಿಸಿರುವ ರೈತರು, ಪೋಸ್ಟ್ ಮೂಲಕ ತೊಗರಿ ಕಾಳು ಕಳುಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ್ದಾರೆ. ತೊಗರಿಗೆ ಪ್ರೊತ್ಸಾಹ ಧನ ನೀಡಲು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ಆದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬೆಳೆಗಾರರು ತೊಗರಿ ದಾನ ಮಾಡಿ ಕೂಡಲೆ ತಮ್ಮ ಹೋರಾಟಕ್ಕೆ ಸ್ಪಂದಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಸುಮಾರು 100 ಜನ ರೈತರು ತಲಾ 1 ಕೆ.ಜಿ ತೊಗರಿಯನ್ನು ಸರ್ಕಾರಕ್ಕೆ ದಾನದ ರೂಪದಲ್ಲಿ ರವಾನಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಹೋಟೆಲ್!