ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.
ಬನಸಗೌಡ ಪಾಟೀಲ್ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು. ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.