ಕಲಬುರಗಿ: ನಗರದ ರಸ್ತೆ ಸುರಕ್ಷತೆ ಕುರಿತು ಸಂಚಾರಿ ಪೊಲೀಸರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.
ರಾಜ್ಯ ಪೊಲೀಸ್ ಇಲಾಖೆ, ಪೊಲೀಸ್ ಕಮೀಷನರೇಟ್ ಹಾಗೂ ಸಂಚಾರಿ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಸುರಕ್ಷತಾ ಸಪ್ತಾಹ ಆಯೋಜಿಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಜಾಥಾ ನಡೆಸಿದರು.
ಬೈಕ್ ಸವಾರರಿಗೆ ಹಾಗೂ ವಾಹನ ಚಾಲಕರಿಗೆ ಪೊಲೀಸರು ಕರಪತ್ರ ಹಂಚುವ ಮೂಲಕ ಸಂಚಾರಿ ಚಿನ್ಹೆಗಳ ಕುರಿತು ಜಾಗೃತಿ ಮೂಡಿಸಿದರು.