ETV Bharat / state

ಕಲಬುರಗಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ - ಕಲಬುರಗಿ ರೌಡಿಶೀಟರ್‌ ಕೊಲೆ ಪ್ರಕರಣ

ಕೊಲೆಯಾದ ರಾಘು ಕೊಲೆ, ಸುಲಿಗೆ, ಕಳ್ಳತನ ಸೇರಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

rowdy-sheeter-murder-in-kalaburagi
ಕಲಬುರಗಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ
author img

By

Published : May 8, 2022, 4:59 PM IST

Updated : May 8, 2022, 5:14 PM IST

ಕಲಬುರಗಿ : ನಗರದಲ್ಲಿ ಹಾಡಹಗಲೇ ಲಾಂಗು, ಮಚ್ಚುಗಳು ಝಳಪಿಸಿವೆ. ಜನಸಂದಣಿ ನಡುವೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಹಾಬಜಾರ್​​ನಲ್ಲಿ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ರಾಘು (28) ಎಂಬಾತನೆ ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ.

ಕೊಲೆಯಾದ ರಾಘು, ರೌಡಿಶೀಟರ್ ಮಾರ್ಕೆಟ್ ಸತ್ಯನ ಸಹಚರನಾಗಿದ್ದ. ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ‌. ಮುಖ ಸೇರಿದಂತೆ ದೇಹದ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆಗೈದು ಹಂತಕರು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ರಾಘು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಕೊಲೆಯಾದ ರಾಘು ಕೊಲೆ, ಸುಲಿಗೆ, ಕಳ್ಳತನ ಸೇರಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೇಯಸಿಯ ನಗ್ನಚಿತ್ರ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆ, ವ್ಯಕ್ತಿ ಬಂಧನ

Last Updated : May 8, 2022, 5:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.