ಕಲಬುರಗಿ: ಸಚಿವ ಎಸ್.ಟಿ. ಸೋಮಶೇಖರ್ ಕಲಬುರಗಿ ನಗರದಲ್ಲಿರುವ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಒಕ್ಕೂಟದ ಆರ್ಥಿಕ ಸ್ಥಿತಿಗತಿ ಮತ್ತು ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ( ವಿಎಸ್ಎಸ್ಎನ್) ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮೇಲೆ ನಿಯಂತ್ರಣ ಹೊಂದಲು ಹೊಸ ಕಾಯ್ದೆ ಜಾರಿಗೆ ತರಲಾಗುತ್ತಿದೆ. ಫ್ಯಾಕ್ಸ್ ಸಿಬ್ಬಂದಿಯ ವರ್ಗಾವಣೆಗೂ ಈ ಕಾಯ್ದೆ ಅನ್ವಯವಾಗಲಿದ್ದು, ಒಟ್ಟಾರೆ ಸಹಕಾರಿ ಕ್ಷೇತ್ರ ಬಲವರ್ಧನೆಗೆ 18 ಬದಲಾವಣೆ ಅಂಶಗಳೊಂದಿಗೆ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959ಅನ್ನು ತಿದ್ದುಪಡಿ ಮುಖಾಂತರ ಹೊಸ ಸಹಕಾರಿ ಕಾಯ್ದೆ ಜಾರಿ ತರಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಸಾರಿಗೆ ನೌಕರರ ವಿರುದ್ಧ ಮತ್ತೊಂದು ಕಾನೂನು ಅಸ್ತ್ರ ಪ್ರಯೋಗಿಸಿದ ನಿಗಮಗಳು
ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದ್ದು, ಮುಂದಿನ ತಿಂಗಳು ನಡೆಯುವ ಅಧಿವೇಶನದಲ್ಲಿ ಬಿಲ್ ಮಂಡಿಸಲಾಗುವುದು ಎಂದು ತಿಳಿಸಿದ ಸಚಿವರು, ಡಿ.ಸಿ.ಸಿ ಮತ್ತು ಅಪೆಕ್ಸ್ ಬ್ಯಾಂಕ್ಗಳನ್ನು ಒಂದೇ ತಂತ್ರಾಂಶದಲ್ಲಿ ತರಲು ಸಹ ಚಿಂತನೆ ನಡೆದಿದೆ ಎಂದು ಮಾಹಿತಿ ನೀಡಿದರು.