ಕಲಬುರಗಿ : ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಮರಳಿನ ಟಿಪ್ಪರ್ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆ ನಗರದ ಹೀರಾಪುರ ಬಡಾವಣೆಯ ಫ್ಲೈಓವರ್ ಬಳಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಟಿಪ್ಪರ್‌ಗೆ ಬೆಂಕಿ ಹಚ್ಚಿದ್ದಾರೆ.
ಮನೀಷ್ ಮಲ್ಲಿಕಾರ್ಜುನ (10) ಮೃತ ಬಾಲಕ. ಪೋಷಕರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಟಿಪ್ಪರ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಬಾಲಕನ ಮೇಲೆ ಹರಿದ ಪರಿಣಾಮ ದೇಹ ಛಿದ್ರಗೊಂಡಿದೆ.
ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಯುವಕನ ಬರ್ಬರ ಕೊಲೆ.. ಕಬ್ಬಿನ ಗದ್ದೆಯಲ್ಲಿ ಶವ ಎಸೆದು ದುಷ್ಕರ್ಮಿಗಳು ಪರಾರಿ
ಈ ವೇಳೆ ಉದ್ರಿಕ್ತರು ಟಿಪ್ಪರ್‌ಗೆ ಬೆಂಕಿ ಹಚ್ಚಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.