ಕಲಬುರಗಿ: ಅಮೋಘಸಿದ್ಧ ಪತ್ತಿನ ಸಹಕಾರ ಸಂಘ ಹಾಗೂ ಕನಕ ಡೆವಲಪರ್ಸ್ ಸಂಯುಕ್ತಾಶ್ರಯದಲ್ಲಿ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು. ಚೇಂಬರ್ ಆಫ್ ಕಾರ್ಮಸ್ ನ ಅಧ್ಯಕ್ಷ ಅಮರನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಆರ್.ಪಿ. ಎಸ್.ಪಿ. ಬಸವರಾಜ್ ಜಿಳ್ಳೆ ದಂಪತಿಗೆ ಸನ್ಮಾನಿಸಲಅಯಿತು. ಡಿ ವೈ ಎಸ್ ಪಿ ಎಸ್.ಎಸ್.ಹುಲ್ಲುರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.